ಮಂಗಳೂರು ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Upayuktha
0


ಮಂಗಳೂರು: ನಗರದ ವಿಶ್ವವಿದ್ಯಾನಿಲಯಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಇಂದು ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಬಿಎ (ಟಿ&ಟಿ) ಪದವಿ ವಿದ್ಯಾರ್ಥಿ ಸಾತ್ವಿಕ್, ಉಪಾಧ್ಯಕ್ಷರಾಗಿ ತೃತೀಯಬಿ.ಕಾಂ. ಪದವಿ ವಿದಾರ್ಥಿಕೀರ್ತನ್, ಜಂಟಿ ನಿರ್ದೇಶಕಿಯಾಗಿ ತೃತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ನಂದಿತಾಎಸ್., ಲಲಿತ ಕಲಾ ಸಂಘದ ಕಾರ್ಯದರ್ಶಿಯಾಗಿ ತೃತೀಯ ಬಿ.ಕಾಂ. ಪದವಿ ವಿದ್ಯಾರ್ಥಿನಿ ಪೂಜಾ ಶೆಟ್ಟಿ, ಹಾಗೂ ಲಲಿತ ಕಲಾ ಸಂಘದ ಸಹ ಕಾರ್ಯದರ್ಶಿಯಾಗಿ ತೃತೀಯ ಬಿಎ ವಿದ್ಯಾರ್ಥಿನಿ ಅನನ್ಯಾ ಅವರು ಆಯ್ಕೆಯಾದರು. 


ಇದಕ್ಕೂ ಮುನ್ನಾ ನಡೆದ ತರಗತಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆಯಲ್ಲಿಒಟ್ಟು 33 ವಿದ್ಯಾರ್ಥಿಗಳು ಆಯ್ಕೆಯಾದರು. ಅವರಲ್ಲಿ 29 ಮಂದಿ ವಿದ್ಯಾರ್ಥಿಗಳು ಹಾಗೂ 4 ಮಹಿಳಾ ಪ್ರತಿನಿಧಿಗಳು ಆಯ್ಕೆಯಾದರು. 


ಈ ಬಾರಿ ವಿದ್ಯಾರ್ಥಿ ಸಂಘದಚುನಾವಣೆಯಲ್ಲಿತರಗತಿ ಪ್ರತಿನಿಧಿ ಸೇರಿದಂತೆ ಸಂಘದ ಪದಾಧಿಕಾರಿಗಳ ಆಯ್ಕೆಯು ಸರ್ವಾನುಮತದಿಂದ ನಡೆದಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ನಂತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಸಂಭ್ರಮಾಚರಣೆ ನಡೆಸಿದರು. 


ಇದೇ ವೇಳೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡ ಅವರು ತರಗತಿ ಪ್ರತಿನಿಧಿಗಳಿಗೆ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಕ್ಷೇಮಪಾಲನಾ ಉಪನಿರ್ದೇಶಕ ಪ್ರೊ. ಕುಮಾರ ಸುಬ್ರಮಣ್ಯ ಭಟ್, ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಪ್ರೊ. ಜಯವಂತ್ ನಾಯಕ್, ವಿದ್ಯಾರ್ಥಿ ಸಂಘದ ಚುನಾವಣಾ ಅಧಿಕಾರಿ ಪ್ರೊ. ಬಿ. ಎಂ. ರಾಮಕೃಷ್ಣ ಸೇರಿದಂತೆ ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.   



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top