ಮಾತಾ ಅಮೃತಾನಂದಮಯಿ ಮಠ, ಮಂಗಳೂರು ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿ ರಚನೆ

Chandrashekhara Kulamarva
0


ಮಂಗಳೂರು: ನಗರದ ಬೋಳೂರಿನಲ್ಲಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆಗೈದಿರುವ ವಿಶಿಷ್ಠ ದೇವಾಲಯ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರ. 2008 ರಲ್ಲಿ ಸ್ಥಾಪಿಸಲ್ಪಟ್ಟ ಈ ದೇವಸ್ಥಾನದ ಅಭಿವೃದ್ಧಿ ಹಾಗೂ ಸಮರ್ಪಕ ನಿರ್ವಹಣೆಗಾಗಿ ನೂತನ ಕ್ಷೇತ್ರಾಭಿವೃದ್ಧಿ ಸಮಿತಿಯನ್ನು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರು ರಚಿಸಿರುತ್ತಾರೆ.


ಡಾ. ಜೀವರಾಜ್ ಸೊರಕೆ ಗೌರವ ಸಲಹೆಗಾರರಾಗಿರುತ್ತಾರೆ. ಗೌರವಾಧ್ಯಕ್ಷರಾಗಿ ಶ್ರೀಮತಿ ಶ್ರುತಿ ಸನತ್ ಹೆಗ್ಡೆ, ಸಲಹೆಗಾರರಾಗಿ ಡಾ.ವಸಂತ ಕುಮಾರ್ ಪೆರ್ಲ ಮತ್ತು ಸೇವಾಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಸೇವೆ ಸಲ್ಲಿಸಲಿದ್ದಾರೆ.


ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವೈ.ಎನ್. ಸಾಲಿಯಾನ್, ಉಪಾಧ್ಯಕ್ಷರುಗಳಾಗಿ ನವೀನ್ ಪಿ ವಿ ಟಿ. ಮತ್ತು ಸುಧಾಕರ್ ಭಟ್, ಕಾರ್ಯದರ್ಶಿ ಡಾ.ದೇವದಾಸ್ ಪುತ್ರನ್ ಮತ್ತು ಕೋಶಾಧಿಕಾರಿಯಾಗಿ ಶಿಲ್ಪಾ ರೈ ಆಯ್ಕೆಯಾಗಿದ್ದಾರೆ. ಪ್ರವೀಣಚಂದ್ರ ಶರ್ಮ, ಟಿ.ಎ. ಅಶೋಕನ್, ರವಿ ಅಲೆವೂರಾಯ ಮತ್ತು ಮಹಾಬಲ ಚೌಟರವರು ಕಾರ್ಯಕಾರಿ ಸದಸ್ಯರರಾಗಿರುತ್ತಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top