ಸದಸ್ಯತ್ವ ಅಭಿಯಾನ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲರಿಗೆ ಬಿ. ವೈ ವಿಜಯೇಂದ್ರ ಸನ್ಮಾನ

Upayuktha
0


ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು (ನ.26) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಂಘಟನಾ ಪರ್ವ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು.


ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಅಭೂತಪೂರ್ವ ಸಾಧನೆ ತೋರಿದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಬಗ್ಗೆ ಹರ್ಷ ವ್ಯಕ್ತಪಡಿಸಿ ಕಾರ್ಯಕರ್ತರ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರನ್ನು ಗೌರವಿಸಿದರು. 


ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌, ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್‌ ಸದಸ್ಯ ಎನ್.‌ ರವಿಕುಮಾರ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top