ಕುಮಟಾ: ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಡಿಸೆಂಬರ್ 2 ರಿಂದ ಫೆಬ್ರವರಿ 25ರ ವರೆಗೆ ಬಂದ್ ಮಾಡಲಾಗುತ್ತಿದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.
ಬದಲಿ ಮಾರ್ಗಗಳ ವಿವರ:
ಕುಮಟಾ-ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 766-ಇ ಮೂಲಕ ಲಘು ವಾಹನಗಳು ಸಂಚರಿಸಬಹುದು.
ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ಮತ್ತು ರಾಜ್ಯ ಹೆದ್ದಾರಿ-93 ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು.
ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು.
ಆದ್ದರಿಂದ ರಾಷ್ಟ್ರೀಯ ಹೆದ್ದಾರಿ-766 ಇ ಕುಮಟಾ-ಶಿರಸಿ ರಸ್ತೆಯಲ್ಲಿ ಉನ್ನತೀಕರಣ ಕಾಮಗಾರಿ ಸಮಯದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಬದಲಾವಣೆ ಸೂಚಿಸಲಾಗಿದೆ. ಪ್ರಯಾಣಿಕರು ಬದಲಿ ಮಾರ್ಗದಲ್ಲಿ ಸಂಚರಿಸಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ