ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ: ವಿವಿಧ ಆಟೋಟ ಸ್ಪರ್ಧೆ

Upayuktha
0


ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಇದರ ಅಂಗವಾಗಿ ಬುಧವಾರ ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂ ದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಿಗೆ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿದರು.  


ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ಶಾರದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸಂಗೀತ  ಜಾನ್ಸನ್, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾವಂಕರ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.  

ಸುಮಾರು 100 ಕ್ಕಿಂತ ಹೆಚ್ಚು ಮಕ್ಕಳು ಸ್ಪರ್ದೆಯಲ್ಲಿ ಭಾಗವಹಿಸಿದ್ದರು.  


ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಗ್ರಂಥಪಾಲಕಿ ರಂಜಿತ ಸಿ. ನಿರೂಪಿಸಿದರೆ. ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top