ಮಂಗಳೂರು ಪತ್ರಿಕಾ ಭವನದಲ್ಲಿ ಇಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ

Upayuktha
0



ಮಂಗಳೂರು: ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ನವೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಹಿರಿಯ ಪತ್ರಿಕಾ ವಿತರಕ ಹಾಗೂ ಕಂಕನಾಡಿ ರೇಣುಕಾರಾಜ್ ನ್ಯೂಸ್ ಏಜನ್ಸಿ ಯ ನಾಗರಾಜ್ ಅವರನ್ನು ಸನ್ಮಾನಿಸಲಿದ್ದಾರೆ.


ಮಂಗಳೂರು  ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಉಪಸ್ಥಿತರಿರುತ್ತಾರೆ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top