ಶ್ರೀನಿವಾಸ್ ಇಂದಾಜೆಗೆ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ

Upayuktha
0

ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ಪ್ರಶಸ್ತಿ




ಮಂಗಳೂರು: ನವದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು.


ಮಂಗಳೂರು ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸಂವಹನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.


ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಉತ್ತಮ ಸಾರ್ವಜನಿಕ ಸಂಪರ್ಕಕ್ಕಾಗಿ ನರೇಶ್ ಕುಮಾರ್ ಸ್ಮರಣಾರ್ಥ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕುತ್ಲುರು ಸರಕಾರಿ ಶಾಲೆ ಅಭಿವೃದ್ಧಿ, ಮಂಗಳೂರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೂ ಶ್ರಮಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top