ಸುರತ್ಕಲ್: ಗೋವಿಂದದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ

Chandrashekhara Kulamarva
0



ಸುರತ್ಕಲ್:ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು ಸುರತ್ಕಲ್ ನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಕಾಲೇಜಿನ ಗ್ರಂಥಾಲಯ ಆಯೋಜಿಸಿದ್ದ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಧನ್ಯಾ ಎ.ಎಸ್‌ರವರು ಸಿ.ಪಿ.ಕೃಷ್ಣಮೂರ್ತಿಯವರು ಬರೆದ ಚಿಂತನ ಚಯ ಎಂಬ ಪುಸ್ತಕವನ್ನು ಪರಿಚಯಿಸಿದರು.


ಜೀವನ ಮೌಲ್ಯವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನವು ಸುಖಕರವಾಗುವುದರಲ್ಲಿ ಸಂದೇಹವಿಲ್ಲ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಪಿ.ಕೃಷ್ಣಮೂರ್ತಿಯವರು ಧನ್ಯ ಎ.ಎಸ್‌ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಪ್ರಾಧ್ಯಾಪಕರುಗಳಾದ ಡಾ. ಸೌಮ್ಯ ಪ್ರವೀಣ, ಭಾಗ್ಯಲಕ್ಷ್ಮೀ  ಡಾ. ಧನ್ಯಕುಮಾರ ವೆಂಕಣ್ಣನವರ್, ಡಾ. ಸಂತೋಷ ಆಳ್ವಾ, ಅಕ್ಷತಾ ವಿ, ಕಿಟ್ಟು ಕೆ, ಗ್ರಂಥಪಾಲಕಿ ಡಾ.ಸುಜಾತಾ ಬಿ, ಉಪಸ್ಥಿತರಿದ್ದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ರಕ್ಷಿತಾ ಸ್ವಾಗತಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top