ನ.20: ಮಂಗಳೂರು ವಿವಿ ಕಾಲೇಜಿನಲ್ಲಿ ರಸಪ್ರಶ್ನೆ, ಪುಸ್ತಕ ವಿಮರ್ಶಾ ಸ್ಪರ್ಧೆ

Upayuktha
0




ಮಂಗಳೂರು: ಭಾರತ್‌ ಫೌಂಡೇಶನ್‌ ನಗರದಲ್ಲಿ ಪ್ರತಿವರ್ಷ ಆಯೋಜಿಸುವ ʼಮಂಗಳೂರು ಲಿಟ್‌ ಫೆಸ್ಟ್‌ʼ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶೆ ಸ್ಪರ್ಧೆ ನಡೆಸಲಾಗುತ್ತಿದೆ.


ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.‌ಪಿ ಕನ್ನಡ ಅಧ್ಯಯನ ಸಂಸ್ಥೆ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಸಹಕಾರದೊಂದಿಗೆ ಭಾರತ್‌ ಫೌಂಡೇಶನ್‌, ನವೆಂಬರ್ 20ರಂದು ಸ್ಪರ್ಧೆಗಳನ್ನು ನಡೆಸಲಿದೆ. ಸ್ಪರ್ಧೆಯಲ್ಲಿ ಯಾವುದೇ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ/ವಿದ್ಯಾರ್ಥಿನಿಭಾಗವಹಿಸಬಹುದು. ಆದರೆ, ಕಾಲೇಜು ಮುಖ್ಯಸ್ಥರಿಂದ ಅನುಮತಿ ಪತ್ರ ಮತ್ತು ಕಾಲೇಜು ಗುರುತಿನ ಚೀಟಿ (ಐಡಿ ಕಾರ್ಡ್‌) ಕಡ್ಡಾಯ. 


ರಸಪ್ರಶ್ನೆ ಸ್ಪರ್ಧೆಯ ನಿಯಮದ ಪ್ರಕಾರ ಒಂದು ತಂಡದಲ್ಲಿಇಬ್ಬರಿರುತ್ತಾರೆ. ಒಂದು ಕಾಲೇಜಿನಿಂದ ಇಂತಹಎರಡು ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶ. ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು ಸ್ಪರ್ಧೆಯ ಮೊದಲ ಹಂತದಲ್ಲಿ ಆಯ್ಕೆಯಾದ 5 ತಂಡಗಳಿಗೆ ಮಂಗಳೂರು ಲಿಟ್ ಫೆಸ್ಟ್ ವೇದಿಕೆಯಲ್ಲಿ ಅಂತಿಮ ಸುತ್ತು ನಡೆಯುತ್ತದೆ.


ಕನ್ನಡ ಸಾಹಿತ್ಯ ಚರಿತ್ರೆ, ಸಾಹಿತ್ಯ, ಕೃತಿಕಾರರ ಜೀವನ ಮುಂತಾದ ಸಾಹಿತ್ಯ ಆಧಾರಿತ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರಶ್ನೆ ಪತ್ರಿಕೆಯು ಆಯ್ಕೆಯ ಪ್ರಶ್ನೆ, ಬಿಟ್ಟಸ್ಥಳತುಂಬುವಿಕೆ, ನೇರ ಪ್ರಶ್ನೆ ಮುಂತಾದ ವಿಭಾಗಗಳಲ್ಲಿ ನೂರು ಪ್ರಶ್ನೆಗಳನ್ನು ಹೊಂದಿರುತ್ತದೆ.


ಪುಸ್ತಕ ವಿಮರ್ಶೆಸ್ಪರ್ಧೆಯಲ್ಲಿ, ಒಂದು ಕಾಲೇಜಿನಿಂದ ಎರಡು ಸ್ಪರ್ಧಿಗಳಿಗೆ ಮಾತ್ರ ಅವಕಾಶ.ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಬಹುದು. ಒಂದು ಪುಸ್ತಕವನ್ನು ಓದಿ ವಿಮರ್ಶೆ ಮಾಡಲು ಅವಕಾಶವಿದೆ. ಪುಸ್ತಕವು ಕಾದಂಬರಿ ಅಥವಾ ಕಥಾ ಸಂಕಲನವಾಗಿರಬೇಕು. ಅಧ್ಯಯನ, ವಿಮರ್ಶಾ ಕೌಶಲ್ಯ ಮತ್ತು ಪ್ರಸ್ತುತಿಗೆ ಅಂಕ ನೀಡಲಾಗುತ್ತದೆ. 4+1 ನಿಮಿಷಗಳ ಕಾಲಾವಕಾಶವಿರುತ್ತದೆ, ಎಂದು ಆಯೋಜಕರು ತಿಳಿಸಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top