ಸುರತ್ಕಲ್: ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಅಗತ್ಯವಾಗಿದ್ದುಆರ್ಥಿಕ ಸಮಸ್ಯೆಗಳಿಂದ ಶಿಕ್ಷಣದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ದಾನಿಗಳು ವಿದ್ಯಾರ್ಥಿ ವೇತನಗಳನ್ನು ನೀಡುತ್ತಿರುವುದು ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದಾಗ ವಿದ್ಯಾರ್ಥಿ ವೇತನಗಳು ಸಾರ್ಥಕವೆನಿಸುತ್ತದೆ. ಹನ್ನೊಂದು ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿ ವೇತನದ ಕೊಡುಗೆ ನೀಡುತ್ತಿರುವ ಭಕ್ತ ಶ್ರೀ ಕುತ್ತೆತ್ತೂರು ಗೋವಿಂದದಾಸ ಚಾರಿಟೇಬಲ್ ಟ್ರಸ್ಟ್ ಫೌಂಡೇಶನ್‌ನಿಂದ ವಿದ್ಯಾರ್ಥಿ ವೇತನ ಪಡೆದ ಅನೇಕ ವಿದ್ಯಾರ್ಥಿಗಳು ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಉನ್ನತ ಸಾಧನೆಗೈದು ಸಮಾಜದಲ್ಲಿಉತ್ತಮ ಸ್ಥಾನಮಾನಗಳನ್ನು ಪಡೆದುಕೊಂಡಿರುವುದು ಸಂತಸದ ವಿಷಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ರಿಜಿಸ್ಟ್ರಾರ್ ಡಾ. ಕೆ.ಜನಾರ್ಧನ್ ಹೇಳಿದರು.
ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ) ಸುರತ್ಕಲ್‌ನ ಆಡಳತಕ್ಕೊಳಪಟ್ಟ ಗೋವಿಂದದಾಸ ಕಾಲೇಜು ಮತ್ತು ಗೋವಿಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಭಕ್ತ ಶ್ರೀ ಕುತ್ತೆತ್ತೂರು ಗೋವಿಂದದಾಸ ಚಾರಿಟೇಬಲ್ ಟ್ರಸ್ಟ್ ಫೌಂಡೇಶನ್‌ನ ವತಿಯಿಂದ ನೀಡುತ್ತಿರುವ ಹನ್ನೊಂದನೇ ವರ್ಷದ ಶ್ರೀ ಹಯಗ್ರೀವ ಆಚಾರ್ಯ ಮತ್ತು ಶ್ರೀಮತಿ ಭಾರತಿದೇವಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ಭಕ್ತ ಶ್ರೀ ಕುತ್ತೆತ್ತೂರು ಗೋವಿಂದದಾಸ ಚಾರಿಟೇಬಲ್ ಟ್ರಸ್ಟ್ ಫೌಂಡೇಶನ್‌ನ ಅಧ್ಯಕ್ಷ ಡಾ.ಕೆ. ರಾಜಮೋಹನರಾವ್ ಮಾತನಾಡಿ ಟ್ರಸ್ಟ್‌ನ ವತಿಯಿಂದ ಕಳೆದ ಹತ್ತು ವರ್ಷಗಳಲ್ಲಿ ಗೋವಿಂದದಾಸ ಪದವಿ ಪೂರ್ವ ಕಾಲೇಜು ಮತ್ತುಗೋವಿಂದದಾಸ ಕಾಲೇಜಿನ 631 ವಿದ್ಯಾರ್ಥಿಗಳು 31,55,000 ಮೌಲ್ಯದ ವಿದ್ಯಾರ್ಥಿ ವೇತನಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿ ವೇತನಗಳೊಂದಿಗೆ ಉಚಿತ ಮಧ್ಯಾಹ್ನದ ಭೋಜನ ನಿಧಿಗೂ ಟ್ರಸ್ಟ್ ಕೊಡುಗೆಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ವೈ.ವಿ. ರತ್ನಾಕರ ಮಾತನಾಡಿ, ವಿದ್ಯಾರ್ಥಿಗಳ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಟ್ರಸ್ಟ್‌ನ ಕಾರ್ಯ ವಿಶಿಷ್ಟವಾದುದು ಎಂದರು.
ಗೋವಿಂದದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ಗೋಪಾಲ ಎಂ.ಗೋಖಲೆ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪಠ್ಯೇತರ ಸಾಧನೆಗಳು ಹಾಗೂ ಪೋಷಕರ ಆರ್ಥಿಕ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಈ ವಿದ್ಯಾರ್ಥಿ ವೇತನಗಳನ್ನು ನೀಡುತ್ತಿರುವುದಾಗಿ ತಿಳಿಸಿದರು.
ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಭಟ್‌ಎಸ್.ಜಿ. ಮತ್ತು ಪ್ರಾಂಶುಪಾಲೆ ಲಕ್ಷ್ಮೀ ಪಿ.ಶುಭ ಹಾರೈಸಿದರು.
ಭಕ್ತ ಶ್ರೀ ಕುತ್ತೆತ್ತೂರು ಗೋವಿಂದದಾಸ ಚಾರಿಟೇಬಲ್ ಟ್ರಸ್ಟ್ ಫೌಂಡೇಶನ್‌ನ ಕಾರ್ಯದರ್ಶಿ ಎಂ. ರಮೇಶ್‌ರಾವ್ ಸ್ವಾಗತಿಸಿದರು. ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ಆಳ್ವ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಮತ್ತು ಗೋವಿಂದದಾಸ ಪದವಿ ಪೂರ್ವಕಾಲೇಜಿನ ಕ್ಷೇಮಪಾಲನಾಧಿಕಾರಿ ವೆಂಕಟ್ರಮಣ ಪೈಕ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು.
ಭಕ್ತ ಶ್ರೀ ಕುತ್ತೆತ್ತೂರು ಗೋವಿಂದದಾಸ ಚಾರಿಟೇಬಲ್ ಟ್ರಸ್ಟ್ ಫೌಂಡೇಶನ್‌ನ ಕೋಶಾಧಿಕಾರಿ ಆಶಾ, ಗೋವಿಂದದಾಸ ಕಾಲೇಜಿನ ಉಪಪ್ರಾಂಶುಪಾಲ ನೀಲಪ್ಪ ವಿ.,ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಸ್ಟಾಫ್ ಅಸೋಸಿಯೇಶನ್‌ನ ಕಾರ್ಯದರ್ಶಿ ಗೀತಾ ಕೆ., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಶೈಲಜಾ ಹೆಚ್., ಸದಸ್ಯ ಯೋಗೀಶ್ ಕಾಂಚನ್ ಬೈಕಂಪಾಡಿ, ಅಲ್ಯುಮ್ನಿ ಅಸೋಸಿಯೇಶನ್‌ನ ಉಪಾಧ್ಯಕ್ಷ ಯೋಗೀಶ್ ಕುಳಾಯಿ, ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಜೊತೆ ಕಾರ್ಯದರ್ಶಿ ಸತೀಶ್ ಸುರತ್ಕಲ್, ಸದಸ್ಯಉದಯ ಭಾಸ್ಕರ್ ವೈ.ವಿ., ಹಿಂದೂ ವಿದ್ಯಾದಾಯಿನೀ ಸಂಘದ ಮಾಜಿ ಕಾರ್ಯದರ್ಶಿ ಐ. ಉಮಾದೇವಿ., ಕಾಲೇಜಿನ ನಿವೃತ್ತ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಯಆಚಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಸ್ತುತ ವರ್ಷದಲ್ಲಿ 60 ವಿದ್ಯಾರ್ಥಿಗಳಿಗೆ ಮೂರು ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನಗಳನ್ನು ಮತ್ತು ಮಧ್ಯಾಹ್ನದ ಭೋಜನ ನಿಧಿಗೆ ರೂ.50,000ವನ್ನು ಟ್ರಸ್ಟ್‌ನ ವತಿಯಿಂದ ನೀಡಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ