ಶಿವಮೊಗ್ಗ: ಮಾನಸ ಸಮೂಹ ಸಂಸ್ಥೆಯ ಮನಸ್ಫೂರ್ತಿ ಕಲಿಕಾ ತರಬೇತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಶಿವಮೊಗ್ಗದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ಶ್ರೀಮತಿ ರೇಣುಕಾರವರು ಉದ್ಘಾಟಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ "ವಿಶೇಷ ಚೇತನ ಮಕ್ಕಳನ್ನು ದೇವರ ಮಕ್ಕಳೆಂದು ನಾವು ಭಾವಿಸಬೇಕು. ಆ ಮಕ್ಕಳ ಪ್ರತಿಭೆಗೆ ತಕ್ಕಂತೆ ಅವಕಾಶಗಳನ್ನು ನೀಡಲು ಪೋಷಕರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು" ಎಂದು ತಿಳಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಶೃತಿಯವರು "ಮಕ್ಕಳಲ್ಲಿ ಮಾತೃ ಭಾಷೆ ಬೆಳೆಸುವ, ಉಳಿಸುವ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು" ಎಂದರು. ಈ ಸಂದರ್ಭದಲ್ಲಿ ಮಾನಸ ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕಿ ಡಾ. ಪ್ರೀತಿ. ವಿ. ಶಾನ್ ಭಾಗ್ ರವರು ಜಿಲ್ಲಾ ಮಟ್ಟದ ಸ್ಪೆಷಲ್ ಒಲಂಪಿಕ್ಸ್ ನಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮಾನಸ ಸಂಸ್ಥೆಯ ಮತ್ತೋರ್ವ ವೈದ್ಯೆ ಡಾ. ಸುಧಾ ರವರು ಮನಸ್ಪೂರ್ತಿಯಲ್ಲಿ ನಡೆಸಿದ ವಿವಿಧ ಕ್ರೀಡೆಗಳಲ್ಲಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಶೇಷ ಚೇತನ ಮಕ್ಕಳಿಗೆ ಬಹುಮಾನವನ್ನು ವಿತರಿಸಿ ಮಕ್ಕಳಲ್ಲಿರುವ ಸ್ಪೂರ್ತಿಯೇ ಯಶಸ್ಸಿಗೆ ಕಾರಣ ಎಂದರು.
ಮಾನಸ ಸಮೂಹ ಸಂಸ್ಥೆಯ ವೈದ್ಯರಾದ ಡಾ. ವಿತಿಕಾ, ಚೀಫ್ ಆಪರೇಟಿಂಗ್ ಆಫೀಸರ್ ವೀಣಾ ಸ್ವಾಮಿಯವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕಿ ಡಾ. ರಜನಿ ಪೈ ರವರು ವಹಿಸಿದ್ದರು. ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಮನಸ್ಪೂರ್ತಿ ಕಲಿಕಾ ತರಬೇತಿ ಕೇಂದ್ರದ ಸಂಯೋಜಕಿ ಶ್ರೀಮತಿ ರಂಗನಾಯಕಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮನಸ್ಪೂರ್ತಿಯ ವಿಶೇಷ ಚೇತನ ಮಕ್ಕಳು ಪ್ರಾರ್ಥನೆ ಮಾಡಿದರು. ಶ್ರೀಮತಿ ಜ್ಯೋತಿ ಅರುಣ್ ಕುಮಾರ್ ರವರು ಸ್ವಾಗತಿಸಿ, ಶ್ರೀಮತಿ ಸವಿತಾ ರಾಣಿಯವರು ವಂದಿಸಿದರು. ಮನಸ್ಪೂರ್ತಿ ಕಲಿಕಾ ತರಬೇತಿ ಕೇಂದ್ರದ ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ