ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ: ನಿಟ್ಟೆ ತಾಂತ್ರಿಕ ಕಾಲೇಜಿನ ಜನಿಟಗೆ ಎರಡು ಪದಕ

Upayuktha
0


ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜ ಅವರು ಕರ್ನಾಟಕ ರೋಲರ್ ಸ್ಕೇಟಿಂಗ್ ಸಂಸ್ಥೆಯು ಆಯೋಜಿಸಿದ ರಾಜ್ಯ ಮಟ್ಟದ 40ನೇ ಕರ್ನಾಟಕ ಚಾಂಪಿಯನ್ ಶಿಪ್ ಮತ್ತು ಸಿಲೆಕ್ಸನ್ ಟ್ರಯಲ್ಸ್ 2024-2025 ಸ್ಪರ್ಧೆಯಲ್ಲಿ ಉಡುಪಿಯ ಕೋಸ್ಟಲ್ ರೋಲರ್ ಸ್ಕೇಟಿಂಗ್ ಕ್ಲಬ್ ನ್ನು ಪ್ರತಿನಿಧಿಸಿ ಭಾಗವಹಿಸಿ ಬೆಳ್ಳಿ ಮತ್ತು ಕಂಚಿನ ಪದಕವನ್ನು ಗಳಿಸಿದ್ದಾರೆ.


ಈ ಸ್ಪರ್ಧೆಯು ನವೆಂಬರ್ 7 ರಿಂದ ನವೆಂಬರ್ 10 ರವರೆಗೆ ಮೈಸೂರಿನಲ್ಲಿ ಜರುಗಿತು. ಇವರು ಉಡುಪಿಯ ಆಗ್ನೆಲ್ಲೊ ಡಿಸೋಜ ಹಾಗೂ ಜೆಸಿಂತಾ ರೋಜ್ ಡಿಸೋಜರವರ ಪುತ್ರಿ ಆಗಿರುತ್ತಾರೆ. ಮನೀಶ್ ಬಂಗೇರ ಮತ್ತು ಕಿಶೋರ್ ಕುಮಾರ್ ಇವರಿಗೆ ಮಾರ್ಗದರ್ಶನ ನೀಡಿರುತ್ತಾರೆ. 17 ರ ಮೇಲಿನ ವಯೋಮಾನದ ಸ್ಪೀಡ್ ಕ್ವಾಡ್ ಮಹಿಳೆಯರ ವರ್ಗದಲ್ಲಿ ಇವರ ಈ ಸಾಧನೆಯಿಂದ ಜನಿಟ ಅವರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top