ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2 ಹಾಗೂ ರೆಡ್ ರಿಬ್ಬನ್ ಕ್ಲಬ್ ಘಟಕ ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಅ.28ರಂದು ಬೆಳಿಗ್ಗೆ 11:00 ಗಂಟೆಗೆ ಬೆಳ್ತಂಗಡಿಯ ಸಂತೆಕಟ್ಟೆ ಮತ್ತು ಬಸ್ ನಿಲ್ದಾಣದಲ್ಲಿ ಎಚ್‌ಐವಿ ಏಡ್ಸ್ ಜಾಗೃತಿ ಕುರಿತು ಬೀದಿನಾಟಕ ಪ್ರದರ್ಶನ ಮಾಡಲಾಯಿತು.
ಈ ಬೀದಿ ನಾಟಕವು ಜನಸಾಮಾನ್ಯರಿಗೆ ಎಚ್ ಐವಿ ಏಡ್ಸ್ ನ ಬಗ್ಗೆ ಅರಿವು ಮೂಡಿಸುವುದರ ಮೂಲಕ ಈ ಸೋಂಕು ಯಾವ ರೀತಿ ಹರಡುತ್ತೆ ಮತ್ತು ಈ ಸೋಂಕಿನಿಂದ ಯಾವೆಲ್ಲ ಪರಿಣಾಮ ಬೀರುತ್ತೆ ಎಂಬುದನ್ನು ತಿಳಿ ಹೇಳಲಾಗಿದೆ. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಡಾಕ್ಟರ್ ಧರ್ಮಪಾಲ ಅವರು ಭಾಗಿಯಾಗಿದ್ದರು. ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಪ್ರೊ. ಸಂತೋಷ್ ಪ್ರಭು ಎಂ ಮತ್ತು ಎನ್ ಎಸ್ ಎಸ್ ನ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ