ಉಡುಪಿ ತಾಲೂಕು - ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

Upayuktha
0


ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.


ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. 


ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹು ದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top