ಡಾ. ಸುಬ್ರಹ್ಮಣ್ಯ ಭಟ್ಟರ ನಾಲ್ಕನೇ ಕಾದಂಬರಿ "ಸುಜ್ಞಾನಿ ಸಹದೇವ" ಬಿಡುಗಡೆ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ "ಸುಜ್ಞಾನಿ ಸಹದೇವ" ವನ್ನು ಭಾನುವಾರ (3-11-2024) ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು, ಅವರ ಪತ್ನಿ ಭವ್ಯ ಜಿ.ಜಿ., ಮಕ್ಕಳಾದ ಅಭಿಗಮ್ಯ ರಾಮ್, ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.


ಮಹಾಭಾರತದಲ್ಲಿ ಎಲೆಮರೆಯ ಕಾಯಿಯಂತಿರುವ ದಿವ್ಯಜ್ಞಾನಿ ಸಹದೇವನ ಕುರಿತ ಸಮಗ್ರ ಮಾಹಿತಿಯುಳ್ಳ ಈ ಕಾದಂಬರಿಗೆ ಹಿರಿಯ ಯಕ್ಷಗಾನ ತಾಳಮದ್ದಳೆ ವಿದ್ವಾಂಸ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯ ಅವರ ಮುನ್ನುಡಿ ಬರೆದಿದ್ದು, ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ  ಪ.ರಾಮಕೃಷ್ಣ ಶಾಸ್ತ್ರಿಯವರು ಶುಭ ನುಡಿಗಳನ್ನು ಬರೆದಿರುತ್ತಾರೆ.


ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top