ಸುರತ್ಕಲ್: ವಿದ್ಯಾರ್ಥಿಗಳ ಅಪಾರ ಪ್ರೀತಿ ಮನ್ನಣೆ ಗಳಿಸಿ ಉತ್ತಮ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ತುಂಬು ಜೀವನ ನಡೆಸಿದ ಪ್ರೊ. ಪಿ.ಕೆ.ಮೊಯ್ಲಿಯವರ ಜೀವನದ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ನುಡಿದರು.
ಇತ್ತೀಚೆಗೆ ನಿಧನರಾದ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಇತಿಹಾಸ ಪ್ರಾಧ್ಯಾಪಕ, ಲೇಖಕ ಹಾಗೂ ಹಿರಿಯ ಪತ್ರಕರ್ತ ಪ್ರೊ.ಪಿ.ಕೆ.ಮೊಯ್ಲಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರೊ.ಪಿ.ಕೆ.ಮೊಯ್ಲಿವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಯನ್ನುಅರ್ಪಿಸಲಾಯಿತು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ಗೋಪಾಲ ಎಂ. ಗೊಖಲೆ, ಮಂಗಳೂರು ವಿ.ವಿಯ ನಿವೃತ್ತ ರಿಜಿಸ್ಟಾರ್ ಡಾ.ಕೆ.ಜನಾರ್ದನ್, ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ.,ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಸ್ಟಾಫ್ ಅಸೋಸಿಯೇಶನ್‌ನ ಕಾರ್ಯದರ್ಶಿ ಗೀತಾ ಕೆ, ವಾಣಿಜ್ಯ ಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ಶಾಸ್ತ್ರ ವಿಭಾಗದ ಡೀನ್ ಮತ್ತು ಎಂ.ಕಾಂ. ವಿಭಾಗದ ಮುಖ್ಯಸ್ಥ ಡಾ.ಗಣೇಶ ಆಚಾರ್ಯ, ಎಂ.ಎಸ್ಸಿ. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕಾರ್ತಿಕ್ ಜೆ.ಎಸ್., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಕಾರ್ಯದರ್ಶಿ ಶೈಲಜಾ ಪ್ರವೀಣ್, ಗೋವಿಂದದಾಸ ಅಲ್ಯಮ್ನಿ ಅಸೋಸಿಯೇಶನ್‌ನ ಅಧ್ಯಕ್ಷೆ ಡಾ.ಸಾಯಿಗೀತಾ. ಉಪಾಧ್ಯಕ್ಷಯೋಗೀಶ್ ಕುಳಾಯಿ, ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಸದಸ್ಯರಾದ ಮೀನಾಕ್ಷಿ ಐತಾಳ್, ಗಂಗಾಧರ ಕೆ., ಶಶಿಕಲಾ ಶೆಟ್ಟಿ, ,ಕಛೇರಿ ಅಧೀಕ್ಷಕ ವೆಂಕಪ್ಪ ಮೂಲ್ಯ, ವಿದ್ಯಾರ್ಥಿ ಸೆನೆಟ್‌ನ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಡಾ. ಸಂತೋಷ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ