ಪುತ್ತೂರು: ಅಸೀಮ ಮನೋಸ್ಥೈರ್ಯ, ಏಕಾಗ್ರತೆ ಮತ್ತುಆತ್ಮಶಕ್ತಿ ಹೊಂದಿದ ವಿಶೇಷ ವ್ಯಕ್ತಿತ್ವ ವಿವೇಕಾನಂದರದು. ಇಂದಿನ ಪೀಳಿಗೆಯಲ್ಲಿ ಧನಾತ್ಮಕ ಚಿಂತನೆಗಳನ್ನು ಬೆಳೆಸಲು ವಿವೇಕಾನಂದರ ಪುಸ್ತಕಗಳನ್ನು ಓದಬೇಕುಎಂದು ಸರ್ವಕ್ಷೇಮಆಸ್ಪತ್ರೆ ಮತ್ತು ಸಂಶೋಧನಾ ಫೌಂಡೇಶನ್‌ನ ವೈದ್ಯಕೀಯ ನಿರ್ದೇಶಕಡಾ| ಎ.ವಿವೇಕ ಉಡುಪ ಹೇಳಿದರು.
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನಕೇಂದ್ರ, ವಿವೇಕಾನಂದ ಸಂಶೋಧನಾಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ ಹಾಗೂ ಐಕ್ಯುಎಸಿ ಇದರ ಸಂಯುಕ್ತಾಶ್ರಯದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಶಮಾನೋತ್ಸವ ಸವಿನೆನಪಿಗಾಗಿ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಉಪನ್ಯಾಸ ಮಾಲಿಕೆ ‘ವಿವೇಕ ಸ್ಮೃತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು, ಯುವಕರಲ್ಲಿಅನಾರೋಗ್ಯ ಹೆಚ್ಚುತ್ತಿದೆ, ಒತ್ತಡಗಳನ್ನು ನಿಯಂತ್ರಿಸಲಾಗದೆ ದುಶ್ಚಟಗಳಿಗೆ ತುತ್ತಾಗುತ್ತಿದ್ದಾರೆ, ಸಾಧನೆಗಳಿಂದ ಹಿಂದೆ ಸರಿಯುತ್ತಿದ್ದಾರೆ. ಭಾರತವನ್ನು ಸರ್ವಶ್ರೇಷ್ಟ ದೇಶವನ್ನಾಗಿ ಕಟ್ಟಲು ಯುವಜನತೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಯುವಜನತೆ ಮಾನಸಿಕ ಹಾಗೂ ದೈಹಿಕ ಆರೋಗ್ಯದತ್ತಲೂ ಗಮನ ಕೊಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಪಸರಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.
ವೇದಿಕೆಯಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯಸರಸ್ವತಿ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಥಮ ಎಂಕಾಂ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ ಸ್ವಾಗತಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿಯರಾದ ಸ್ವಾತಿ ವಂದಿಸಿ, ಅನನ್ಯಾ ಅಡಿಗ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ