ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ

Upayuktha
0


ಮಂಗಳೂರು: ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ. ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ  ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ  ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ.  ಅಂದು ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ.  10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ  ಹಾಗೂ ಪ್ರಾರ್ಥನೆಯಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top