ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್...’

Upayuktha
0

ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ



ಮೂಡುಬಿದಿರೆ:  ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.


ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್' ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ತುಳು ಭಾಷೆಯು  ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.  


ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ.  ತುಳು ಭಾಷಿಕರು ತುಳು  ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು.


‘ನಾಣಜ್ಜೆರ್ ಸುದೆ ತಿರ್ಗಾಯೆರ್' ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದಾಗಿದ್ದು. ತುಳು ಸಾಹಿತ್ಯವು ಈ ಕೃತಿಯ ನಂತರ  ತಿರುವು ಪಡೆದುಕೊಂಡಿದೆ ಎಂದರು.


ವಾಣಿಜ್ಯ  ವೃತ್ತಿಪರ  ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಇದ್ದರು.  ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನೀಶಾ ಶೆಟ್ಟಿ ವಂದಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top