ನ.18 ಕನಕದಾಸ ಜಯಂತಿ ಕಾರ್ಯಕ್ರಮ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಹಾಲುಮತ ಮಹಾಸಭಾ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ-2024 ಕಾರ್ಯಕ್ರಮವು ನವೆಂಬರ್ 18 ರಂದು ಬೆಳಗ್ಗೆ 9.45 ಕ್ಕೆ ನಗರದ ಅಜ್ಜರಕಾಡುವಿನ ಭುಜಂಗ ಪಾರ್ಕ್‌ನಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್ ತಂಗಡಗಿ, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಕನಕದಾಸ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ  ಬಸವರಾಜ್ ವೈ. ಕುರುಬರ, ಹಾಲುಮತ ಮಹಾ ಸಭಾದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೆಚ್ ಐಹೊಳೆ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಲಿದ್ದಾರೆ



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top