ಉಡುಪಿ: ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

Upayuktha
1 minute read
0


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಗಳು ಒಟ್ಟಾಗಿ ನವೆಂಬರ್ 01, 1985 ರಿಂದ ರಾಜ್ಯದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿವೆ. ಇದಕ್ಕೆ ರಾಜ್ಯದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.  


ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾದ ದಿನದಂದು ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿನಾಯಿತಿಯಿದೆ.


ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ 18 ರಿಂದ 50 ವಯಸ್ಸಿನ ಒಳಗಿನ ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಫ್ಟ್ ನ್ನು  ಕಳುಹಿಸಿ ಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.


ತಂಡದ ತರಬೇತಿಯು ನವೆಂಬರ್ ನಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೊತ್ರಿ, ಮೈಸೂರು-570006. ದೂ.ಸಂ. 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟಿಯನ್ನು ಕಳುಹಿಸಿ ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top