ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Upayuktha
0


ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರಸಭೆಯ ಸಭಾಂಗಣದಲ್ಲಿ ನಡೆಯಿತು. 


ಕಾರ್ಯಕ್ರಮದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪೌರಕಾರ್ಮಿಕರಾದ ಬದ್ದು ನಾಯ್ಕ್ ಮತ್ತು ಗೀತಾ ಬಾಯಿ ಹಾಗೂ ಕಂಡ್ಯಾ ನಾಯ್ಕ್ ಮತ್ತು ವೇದಾವತಿ ದಂಪತಿಗಳ ಮಕ್ಕಳಾದ ಬಿ.ಎಸ್ ಸುನೀತಾ ಕುಮಾರಿ ಮತ್ತು ವಿಷ್ಣು ನಾಯ್ಕ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 


ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಪೌರಾಯುಕ್ತ ಡಾ.ಉದಯ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ಪರಿಸರ ಅಭಿಯಂತರರಾದ ಸ್ನೇಹಾ ಕೆಎಸ್ ಹಾಗೂ ನಗರಸಭೆಯ ಆರೋಗ್ಯ ನಿರೀಕ್ಷಕರು, ನಗರಸಭೆಯ ಸದಸ್ಯರು ಮತ್ತು ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top