ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ ಹಾಗೂ ಕಾರ್ಮಿಕರ ಭವಿಷ್ಯ ಶಿಧಿ ಸಂಘಟನೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವು ನವೆಂಬರ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಉದ್ಘಾಟಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ. ಆರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ, ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯ ಜಿಲ್ಲಾ ಪ್ರಾದೇಶಿಕ ಆಯುಕ್ತ ಸಂದೀಪ್ ಕುಮಾರ್, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ಪ್ರತಾಪ್ ಹೆಚ್ ಎ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ಮತ್ತು ವೈದ್ಯಕೀಯ ಸೇವೆಯ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಹೆಮಂತ್ ಕುಮಾರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ