ಪುತ್ತೂರು: ಜಗತ್ತೇ ಒಂದು ಕುಟುಂಬದಂತೆ ಎಂದು ಭಾರತೀಯ ಸಂಸ್ಕೃತಿ ಸಾರಿದೆ. ಕೂಡಿ ಬಾಳುವ ಗುಣ ಈ ಮಣ್ಣಿನಲ್ಲಿದೆ . ಪಕ್ಷಿ, ಪ್ರಾಣಿ, ನದಿ, ಗಿರಿ ಶಿಖರಗಳಿಂದ ಕೂಡಿದ ಪ್ರಕೃತಿಗೆ ಹಾಗೂ ಸಮಸ್ತ ಮಾನವ ಸಮಾಜಕ್ಕೆ ಪ್ರಾಮುಖ್ಯತೆ ನೀಡಿ ಗೌರವಿಸುವ ಗುಣ ಈ ದೇಶದಲ್ಲಿ ಕಾಣಬಹುದಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ| ಆರ್ ವೇದವ್ಯಾಸ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಸಮಾಜಶಾಸ್ತ್ರ ವಿಭಾಗ, ಭಾರತೀಯ ಲಲಿತ ಕಲೆಗಳ ಅಧ್ಯಯನ ಕೇಂದ್ರ, ಐಕ್ಯೂಎಸಿ ಹಾಗೂ ಕುಕ್ಕೆ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಹಯೋಗದಲ್ಲಿ ನಡೆದ ಭಾರತೀಯ ಕುಟುಂಬ ಪದ್ಧತಿಯ ಬಗ್ಗೆ ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಬೆಳ್ಳಾರೆಯ ನಿವೃತ್ತ ಪ್ರಾಂಶುಪಾಲ ಬಿ.ವಿ ಸೂರ್ಯನಾರಾಯಣ ಮಾತನಾಡಿ, ಸಹಕಾರಿ ವ್ಯವಸ್ಥೆ ಭಾರತೀಯ ಕುಟುಂಬಗಳಲ್ಲಿ ಜಾರಿಯಲ್ಲಿದೆ. ಕುಟುಂಬದ ಸದಸ್ಯರಲ್ಲಿ ಪರಸ್ಪರ ನೆರವಾಗುವ ಗುಣ ಕುಟುಂಬಗಳಲ್ಲಿರಬೇಕು. ಹಿರಿಯರಿಂದ ನಡೆದುಕೊಂಡು ಬಂದಿದೆ ಎಂಬ ಕಾರಣಕ್ಕಷ್ಟೇ ಆಚಾರ- ವಿಚಾರಗಳನ್ನು ಪಾಲಿಸದೇ ಅವುಗಳ ಹಿಂದಿನ ಕಾರಣ ಹಾಗೂ ಮಹತ್ವವನ್ನರಿತು ಆಚರಿಸಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ ಕರ‍್ಯಕ್ರಮಕ್ಕೆ ಶುಭ ಹಾರೈಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಹಾಗೂ ಕಲಾ ವಿಭಾಗದ ಡೀನ್ ಡಾ| ದುರ್ಗಾರತ್ನ ಸಿ, ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಮಾಜಶಾಸ್ತ್ರ ವಿದ್ಯಾರ್ಥಿನಿ ಸುಮಶ್ರೀ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ| ವಿದ್ಯಾ ಎಸ್ ವಂದಿಸಿದರು. ವಿದ್ಯಾರ್ಥಿಗಳಾದ ರಶ್ಮಿತಾ ಹಾಗೂ ಪ್ರತಿಕ್ಷಾ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ