ವಿಟಿಯು ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ

Upayuktha
0


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.


ಬೆಂಗಳೂರಿನ ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.


ತಂಡವನ್ನು ಸಮರ್ಥವಾಗಿ ಮುನ್ನಡೆಸಿದ ನಾಯಕಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವರ್ಷಿತಾ.ಪಿ.ಆಳ್ವಾ ವಿಭಾಗ ಮಟ್ಟದ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳೆರಡರಲ್ಲೂ ಬೆಸ್ಟ್ ರೈಡರ್ ಆಗಿ ಹೊರಹೊಮ್ಮಿದ್ದಾರೆ.


ಈ ಮೊದಲು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನವನ್ನು ಗೆದ್ದುಕೊಂಡು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು.


ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ರಶ್ಮಿ.ಎ, ವಿದ್ಯಾ.ಸಿ.ಎಸ್, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಶ್ರೇಯಾ.ಎಂ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸಿಂಚನಾ.ವಿ.ಎಸ್, ಅನೂಷಾ.ಎಸ್, ಲಿಪಿ.ಪಿ.ಯು, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ರಚನಾ.ಕೆ.ಡಿ, ಶ್ರಾವ್ಯ.ಎಲ್.ಕೆ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ, ಸಾತ್ವಿಕಾ.ಎಂ.ಡಿ ಮತ್ತು ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ತೇಜಶ್ವಿ.ಯು ವಿಜೇತ ತಂಡದ ಸದಸ್ಯರಾಗಿದ್ದಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರು ವಿಜೇತ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top