ಮಂಗಳೂರು: ಅದ್ಭುತ ತರಬೇತಿ ಹಾಗೂ ತಂಡ ನಿರ್ವಹಣೆಯಿಂದ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು (ಎಸ್.ಐ.ಟಿ) ಇದರ ಮಹಿಳಾ ಕಬಡ್ಡಿ ತಂಡ ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (ವಿಟಿಯು) ಬೆಳಗಾವಿ ಮಂಗಳೂರು ವಲಯದ ಅಂತರ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಸದಾ ತನ್ನ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುತ್ತಾ ಬಂದಿದ್ದು ಈ ಪ್ರಶಸ್ತಿ ಇದಕ್ಕೆ ಸಾಕ್ಷಿಯಾಗಿದೆ. ಈ ಗೆಲುವು ಕಾಲೇಜಿನ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವವನ್ನುಅಭಿವೃದ್ದಿಪಡಿಸಲು ಮತ್ತು ಮಹಿಳಾ ಕ್ರೀಡಾಪಟುಗಳನ್ನು ಬೆಂಬಲಿಸುವ ನಿಷ್ಠೆಗೆ ಸಾಕ್ಷಿಯಾಗಿರುತ್ತದೆ.
ಎ. ಶ್ಯಾಮರಾವ್ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಡಾ| ಸಿಎ.ಎ.ರಾಘವೇಂದ್ರ ರಾವ್, ಉಪಾಧ್ಯಕ್ಷ ಡಾ| ಎ. ಶ್ರೀನಿವಾಸ್‌ರಾವ್, ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀನಿವಾಸ ಮಯ್ಯ ಡಿ, ಈ ಸಾಧನೆ ವಿದ್ಯಾರ್ಥಿಗಳ ಹಾಗೂ ದೈಹಿಕ ನಿರ್ದೇಶಕರ ಕಠಿಣ ಪರಿಶ್ರಮದ ಫಲ, ಹಾಗೆ ಮುಂದೆಯೂ ಯಶಸ್ಸುಗಳು ಸಿಗಲಿ ಎಂದು ಹಾರೈಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ