ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: ವಿವೇಕಾನಂದ ಪಿಯು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

Chandrashekhara Kulamarva
0

ಪುತ್ತೂರು: ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ, ಮಧ್ಯ ಪ್ರದೇಶ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ.


ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಮೃದ್ಧಿ ಜೆ. ಶೆಟ್ಟಿ ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ 100ಮೀ ಹರ್ಡಲ್ಸ್‌ ನಲ್ಲಿ ತೃತೀಯ,  ಸಾತ್ವಿಕ್‌. ಆರ್‌ 110ಮೀ ಹರ್ಡಲ್ಸ್ ನಲ್ಲಿ ತೃತೀಯ, ಸಚಿತ್ ಪಿ.ಕೆ 400 ಮೀ ಹರ್ಡಲ್ಸ್‌ ಹಾಗೂ 4X 400 ಮೀ ರಿಲೇಯಲ್ಲಿ ತೃತೀಯ, ಚವನ್‌ ಕುಮಾರ್‌ 4X400 ಮೀ ರಿಲೇಯಲ್ಲಿ ತೃತೀಯ ಸ್ಥಾನಿಗಳಾಗಿದ್ದಾರೆ.


ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top