ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯದ ರಾಜ್ಯಪಾಲ ವಿಜಯಶಂಕರ್ ಭಾಗಿ

Upayuktha
0


ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ  ಸಿ. ಎಚ್ ವಿಜಯಶಂಕರ್ ಪಾಲ್ಗೊಂಡರು.


ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನ ಗೈದ ರಾಜ್ಯಪಾಲರು ಗೀತಾಮಂದಿರದಲ್ಲಿ ಪೂಜ್ಯ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು.

ಪೂಜ್ಯಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.


ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ಮಾನ್ಯರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರ ವಿಗ್ರಹಕ್ಕೆ ನಮಿಸಿದರು.


ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು. 


ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top