ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರ

Upayuktha
1 minute read
0

 


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಗ್ರಾಮ ಪಂಚಾಯತ್ ಕುರ್ಕಾಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರವು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಸೋಮವಾರ ನಡೆಯಿತು. 


ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಆನಂದ ಪೂಜಾರಿ ಕಾರ್ಯಾಗಾರ ಉದ್ಘಾಟಿಸಿದರು.


ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. 


ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಚರಣ್ ದ್ರಾವಿಡ್, ಅಪೌಷ್ಠಿಕತೆ ಕುಷ್ಠರೋಗ, ಕ್ಷಯರೋಗ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಆಶ್ವಿನಿ, ರಕ್ತಹೀನತೆ, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಬಗ್ಗೆ ಹಾಗೂ ಅಂಗನವಾಡಿ ಮೇಲ್ವಿಚಾರಕಿ ಫಿಲೋಮಿನಾ ರೆಬೆಲ್ಲೋ ಬಾಲ್ಯ ವಿವಾಹದ ಬಗ್ಗೆ ತಿಳಿಸಿದರು.


ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನತಾಲಿಯಾ ಮಾರ್ಟಿಸ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 


ದತ್ತಾಂಶ ನಮೂದಕ ಹೇಮಂತ್ ಸ್ವಾಗತಿಸಿ ವಂದಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top