ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ: ಪಿ.ಬಿ. ಹರೀಶ್ ರೈ

Upayuktha
0


ಮಂಗಳೂರು: ನಗರದ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್, ವಿದ್ಯಾರ್ಥಿ ಪರಿಷತ್ ಮತ್ತು ಐಕ್ಯುಎಸಿ ಸಹಯೋಗದಲ್ಲಿ ನವ ಮತದಾರರ ನೋಂದಣಿ ವಿಶೇಷ ಅಭಿಯಾನ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ "ಸ್ವತಂತ್ರ ಭಾರತದಲ್ಲಿ ಯಶಸ್ವಿಯಾಗಿ ಸಾರ್ವತ್ರಿಕ ಚುನಾವಣೆಗಳು ನಡೆದಿದ್ದು, ಮತದಾನ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಕಲ್ಪಿಸಿದೆ. ಭವಿಷ್ಯದ ರೂವಾರಿಗಳಾಗಿರುವ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಲವರ್ಧನೆಗೆ ನಿರ್ಣಾಯಕ ಕೊಡುಗೆ ನೀಡಬೇಕು ಎಂದರು.


ವಿದ್ಯಾರ್ಥಿಗಳು ಮತದಾರರಾಗಿ ನೋಂದಣಿಯಾಗುವುದರ ಜತೆಗೆ ಚುನಾವಣಾ ಸಾಕ್ಷರತಾ ಕ್ಲಬ್ ಮೂಲಕ ಮತದಾನದ ಬಗ್ಗೆ ಜನಸಾಮಾನ್ಯರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.


ಕಾಲೇಜಿನ ಪ್ರಾಂಶುಪಾಲೆ ಡಾ.ಗೀತಾ.ಎಂ.ಎಲ್. ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಯೋಜಕಿ ಡಾ. ತೆರೆಜ್ ಪಿರೇರಾ, ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಯೋಜಕಿ ಪ್ರಮೀಳಾ ರಾವ್ ಕೆ., ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಮಮತಾ ಯು., ಕಾವೂರು ಸರ್ಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಸಚೇತ್ ಸುವರ್ಣ, ವಿದ್ಯಾರ್ಥಿ ಪ್ರತಿನಿಧಿ ರಕ್ಷಿತಾ ಉಪಸ್ಥಿತರಿದ್ದರು.


ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಸಂತೋಷ್ ಪಿಂಟೊ ಸ್ವಾಗತಿಸಿ, ವಿದ್ಯಾರ್ಥಿನಿ ಲಿಖಿತಾ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ಪ್ರದೀಪ್  ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments
Post a Comment (0)
To Top