ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ವ್ಯಾಸನಕೆರೆ ಪ್ರಭಂಜನಾಚಾರ್ಯ ಆಯ್ಕೆ

Upayuktha
0


ಬೆಂಗಳೂರು: ಶ್ರೀ ಸಂತ ಕನಕದಾಸ ಜಯಂತಿ ಪ್ರಯುಕ್ತ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ ಗೆ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.


ಸೋಮವಾರ ನವೆಂಬರ್ 18ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು. 


ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top