ವೆನ್‍ಲಾಕ್ ಶಸ್ತ್ರಚಿಕಿತ್ಸೆ: ಉಸ್ತುವಾರಿ ಸಚಿವರಿಂದ ಶ್ಲಾಘನೆ

Upayuktha
0


ಮಂಗಳೂರು: ವೆನ್‍ಲಾಕ್ ಜಿಲ್ಲಾಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ರೋಗಿಗಳ ಸೇವೆ ಆರಂಭಗೊಂಡಿರುವುದಕ್ಕೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ.

 

ಅಗಸ್ಟ್ 15ರಂದು ಉದ್ಘಾಟನೆಗೊಂಡಿದ್ದ, ಈ ನೂತನ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ನವೆಂಬರ್ 7ರಿಂದ ರೋಗಿಗಳ ಶಸ್ತ್ರಚಿಕಿತ್ಸೆಗಳು ಆರಂಭಗೊಂಡು, ಮೊದಲ ದಿನವೇ 7 ಶಸ್ತ್ರಚಿಕಿತ್ಸೆಗಳು ನಡೆದಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆ ನಡೆಸಲು ಕಾರ್ಯಯೋಜನೆ ರೂಪಿಸಲಾಗುವುದು. ಈ ನೂತನ ಶಸ್ತ್ರಚಿಕಿತ್ಸಾ ಘಟಕದಿಂದ ಜಿಲ್ಲೆಯ ಜನರಿಗೆ ಅತ್ಯುತ್ತಮ ಚಿಕಿತ್ಸಾ ಸೇವೆಗಳು ದೊರಕಲಿವೆ ಎಂದು ಸಚಿವರು ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top