ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ

Upayuktha
0



ಪುತ್ತೂರು:ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನವಂಬರ್ 13,14 ಬುಧವಾರ ಮತ್ತು ಗುರುವಾರದಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ. ನವಂಬರ್​ 13 ರ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ಇವರು ವಹಿಸಿಕೊಳ್ಳಲಿದ್ದಾರೆ. ಕಿಶೋರ್​ ಕುಮಾರ್​ ಬೊಟ್ಯಾಡಿ ಮಾನ್ಯ ಸದಸ್ಯರು, ವಿಧಾನ ಪರಿಷತ್​ ಕರ್ನಾಟಕ ಸರಕಾರ ಹಾಗೂ ಹಿರಿಯ ವಿದ್ಯಾರ್ಥಿ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


 ಕಾರ್ಯಕ್ರಮದ ಪ್ರಧಾನ ವಕ್ತಾರರಾಗಿ ರಾಜೇಶ್​ ಪದ್ಮಾರ್​, ಪ್ರಾಂತ ಪ್ರಚಾರ ಪ್ರಮುಖ್​, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಇವರು ಪಾಲ್ಗೊಳ್ಳಲಿದ್ದಾರೆ. ಸತೀಶ್​ ರಾವ್​, ಉಪಾಧ್ಯಕ್ಷರು, ಆಡಳಿತಮಂಡಳಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಹಾಗೂ ಹರಿಣಾಕ್ಷಿ ಜೆ ಶೆಟ್ಟಿ, ಅಧ್ಯಕ್ಷರು ಶಿಕ್ಷಕ-ರಕ್ಷಕ ಸಂಘ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. 


ಈ ಸಂದರ್ಭದಲ್ಲಿ ರಾಷ್ಟ್ರ, ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ʼಸಾಧನಾ ದರ್ಪಣʼ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 11 ಗಂಟೆಯಿಂದ ವಿಶೇಷ ಕಾರ್ಯಕ್ರಮವಾಗಿ ವಿಠ್ಠಲ ನಾಯಕ್​ ಮತ್ತು ಬಳಗದವರಿಂದ ʼಗೀತಾ ಸಾಹಿತ್ಯ ಸಂಭ್ರಮʼ  ನಡೆಯಲಿದೆ. ಅಪರಾಹ್ನ 1 ಗಂಟೆಯಿಂದ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ನೃತ್ಯ  ವೈಭವ ನಡೆಯಲಿದೆ. 


ನವಂಬರ್ 14 ರಂದು ʼಪರಂಪರಾ ದರ್ಶನʼ ಎಂಬ ಶೀರ್ಷಿಕೆಯೊಂದಿಗೆ ಕಾಲೇಜು ವಾರ್ಷಿಕೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್​. ಗೋಪಾಲಕೃಷ್ಣ ಭಟ್​, ಸಂಚಾಲಕರು, ಆಡಳಿತಮಂಡಳಿ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಕಮಲಾ ಪ್ರಭಾಕರ ಭಟ್​, ಕರ್ನಾಟಕ ದಕ್ಷಿಣ / ಹೊಯ್ಸಳ ಪ್ರಾಂತ ಕಾರ್ಯಕಾರಿಣಿ, ಸದಸ್ಯರು ರಾಷ್ಟ್ರಸೇವಿಕಾ ಸಮಿತಿ ಹಾಗೂ ಸುಧನ್ವ ಆಚಾರ್ಯ, ಆಡಳಿತಮಂಡಳಿ ಪಾಲುದಾರರು ಜಿ ಎಲ್​ ಸಮೂಹ ಸಂಸ್ಥೆಗಳು ಪುತ್ತೂರು ಹಾಗೂ ಹಿರಿಯ ವಿದ್ಯಾರ್ಥಿ, ವಿವೇಕಾನಂದ ಪದವಿಪೂರ್ವ ಕಾಲೇಜು ಪುತ್ತೂರು ಇವರು ಭಾಗವಹಿಸಲಿರುವರು.


 ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕರಾದ ವತ್ಸಲಾ ರಾಜ್ಞಿ , ಇಂದಿರಾ ಬಿ ಕೆ ಹಾಗೂ ಪ್ರಸನ್ನ ಕುಮಾರ್​, ಜತೆಕಾರ್ಯದರ್ಶಿ ಶಿಕ್ಷಕ-ರಕ್ಷಕ ಸಂಘ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ಉಪಸ್ಥಿತಿ ಇರಲಿದ್ದಾರೆ.  ದತ್ತಿನಿಧಿ ಹಾಗೂ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಈ ದಿನ ನಡೆಯಲಿದೆ.  ಸಭಾಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top