ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಚಾಂಪಿಯನ್ಸ್

Chandrashekhara Kulamarva
0


ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ಸಹಯೋಗದಲ್ಲಿ ನವೆಂಬರ್ 21 ಮತ್ತು 22ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಸ್  ಆಗಿ ಹೊರಹೊಮ್ಮಿದ್ದಾರೆ.  


ಶಶಾಂಕ್ ನಾಗರಾಜ್ ದೊಡ್ಡಮನಿ (55 ಕೆಜಿ ವಿಭಾಗ), ಈರಯ್ಯ ಬಸಯ್ಯ  ಹಿರೇಮಠ್ (61 ಕೆಜಿ ವಿಭಾಗ), ಪವನ್  ಎಸ್ ದೊಡ್ರಲ್ (102 ಕೆಜಿ ವಿಭಾಗ) ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸಪಕಲೆ ಸುನಿಲ್ ಅಶೋಕ್ (109ಕೆಜಿ ವಿಭಾಗ) ಬೆಳ್ಳಿ ಹಾಗೂ ಮಹಾನಭಾವ ಹರ್ಷಲ್ (61ಕೆಜಿ ವಿಭಾಗ) ಕಂಚಿನ ಪದಕ ಪಡೆದಿದ್ದಾರೆ.  



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top