ಕಾವೂರು ಶ್ರೀ ಮಹಾಲಿಂಗೇಶ್ವರ ದೇವರ ಬಾಲಾಲಯ ಪ್ರತಿಷ್ಠೆ

Upayuktha
0


ಮಂಗಳೂರು: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 9ರ ವರೆಗೆ ನಡೆಯಲಿದ್ದು, ಗರ್ಭಗುಡಿಯ ನವೀಕರಣ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ನ.20) ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯ ನೆರವೇರಿಸಲಾಯಿತು.


ಕುಡುಪು ನರಸಿಂಹ ತಂತ್ರಿ, ಕೃಷ್ಣರಾಜ ತಂತ್ರಿ ಅವರ ನೇತೃತ್ವದಲ್ಲಿ ಕಾವೂರು ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ ಅವರ ಉಪಸ್ಥಿತಿಯಲ್ಲಿ ಬೆಳಗಿನ ಜಾವ 7 ಗಂಟೆಗೆ ಸಂಹಾರತತ್ವ ಹೋಮ, ಸಂಹಾರತತ್ವ ಕಲಶ, ಕಲಶಾಭಿಷೇಕ, ಸಂಕೋಚ ಪ್ರಕ್ರಿಯೆ, ಜೀವ ಕಲಶ ಪೂಜೆ, ಜೀವೋದ್ವಾಸನೆ ನೆರವೇರಿತು. ಬೆಳಗ್ಗೆ 11:30ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ದೇವರ ಬಾಲಾಲಯ ಪ್ರತಿಷ್ಠೆ ಕಲಶಾಭಿಷೇಕ ಹಾಗೂ ಪ್ರಸನ್ನ ಪೂಜೆ ನಡೆಯಿತು.


ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ, ಶಾಸಕ ಡಾ. ಭರತ್ ಶೆಟ್ಟಿ ವೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ಪ್ರಭು, ಕಾರ್ಯನಿರ್ವಹಣಾಧೀಕಾರಿ ಶ್ವೇತಾ ಪಳ್ಳಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆಶಿಕ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ, ಕಾರ್ಯಾಧ್ಯಕ್ಷ ಅವಿನಾಶ್ ನಾಯ್ಕ್‌, ಕೋಶಾಧಿಕಾರಿ ದೀಪಕ್ ಪೂಜಾರಿ, ಮಾರ್ಗದರ್ಶಕ ರಾಮಣ್ಣ ಶೆಟ್ಟಿ ಮುಗಿಪು, ಟ್ರಸ್ಟಿಗಳಾದ ಕೆ. ಸದಾಶಿವ ಶೆಟ್ಟಿ, ಹರೀಶ್ ಶೆಟ್ಟಿ, ಪುರುಷೋತ್ತಮ ಎನ್ ಪೂಜಾರಿ, ಗಿರಿಜಾತೆ ಆರ್ ಭಂಡಾರಿ, ಉಮಾನಾಥ್, ವೀಣಾ ಆಚಾರ್, ಆರ್ಥಿಕ ಸಮಿತಿಯ ಪ್ರಸನ್ನ ಭಟ್ ಮುಂತಾದವರು ಪಾಲ್ಗೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top