ಉಜಿರೆ: ವಿಶ್ವ ಏಡ್ಸ್ ದಿನ ಅಂಗವಾಗಿ ಇಲ್ಲಿನ ಎಸ್‌ಡಿಎಂ ಮಹಿಳಾ ಐಟಿಐಯಲ್ಲಿ ಡಿ. 3 ರಂದು ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿ, ಉಜಿರೆಯ ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಸುಜಾತ ಅವರು, ಏಡ್ಸ್ ಹರಡುವ ವಿಧಾನ, ತಡೆಗಟ್ಟುವಿಕೆ, ರಕ್ತದಾನ ಮಾಡುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಇತ್ಯಾದಿ ವಿಚಾರ ಕುರಿತು ಮಾತನಾಡಿದರು.
ಸರ್ಕಾರಗಳು ಕಳೆದ ಇಪ್ಪತ್ತು ವರ್ಷಗಳಿಂದ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಪರಿಣಾಮ ಏಡ್ಸ್ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷ ಕಡಿಮೆಯಾಗುತ್ತಾ ಬಂದಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ದಿವ್ಯಾ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ