ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರೊಬೊಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ವಿಭಾಗವು 'ಎಂಜಿನಿಯರಿಂಗ್ ಶಿಕ್ಷಣದಲ್ಲಿ ಎಆರ್ ಮತ್ತು ವಿಆರ್' ಎಂಬ ವಿಷಯದ ಕುರಿತು ಮೂರು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಡಿ.16 ರಂದು ಉದ್ಘಾಟಿಸಲಾಯಿತು.
ಕಾರ್ಯಾಗಾರವನ್ನು ಕಾಲೇಜಿನ ಉಪಪ್ರಾಂಶುಪಾಲ ಮತ್ತು ಡೀನ್ (ಎಕಾಡೆಮಿಕ್ಸ್) ಡಾ.ಐ.ಆರ್.ಮಿತ್ತಂತಾಯ ಉದ್ಘಾಟಿಸಿದರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳ ಮಹತ್ವವನ್ನು ತಿಳಿಸಿದರು. ಎಂಐಟಿ ಮಣಿಪಾಲದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಿಮ್ಸಿಮೋಲ್ ಜೇಮ್ಸ್ ಅವರು ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಎಂಜಿನಿಯರಿಂಗ್ ಶಿಕ್ಷಣದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಆಗ್ಮೆಂಟೆಡ್ ರಿಯಾಲಿಟಿ (ಎಆರ್) ಮತ್ತು ವರ್ಚುವಲ್ ರಿಯಾಲಿಟಿ (ವಿಆರ್) ನ ಪರಿವರ್ತಕ ಸಾಮರ್ಥ್ಯವನ್ನು ವಿವರಿಸಿದರು.
ರೊಬೊಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ವಿಭಾಗದ ಮುಖ್ಯಸ್ಥ ಡಾ.ಮುರಳೀಧರ ಸ್ವಾಗತಿಸಿದರು. ರೊಬೊಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ವಿಭಾಗದ ಸಹಪ್ರಾಧ್ಯಾಪಕಿ ಡಾ.ರಶ್ಮಿ ಪಿ.ಶೆಟ್ಟಿ ಅವರು ಎಫ್ ಡಿಪಿಯನ್ನು ಸಂಯೋಜಿಸಿದರು. ಎಂಜಿನಿಯರಿಂಗ್ ಶಿಕ್ಷಣದಲ್ಲಿ ಎಆರ್ ಮತ್ತು ವಿಆರ್ ಅನ್ನು ಸಂಯೋಜಿಸಲು, ನವೀನ ಬೋಧನಾ ವಿಧಾನಗಳನ್ನು ಬೆಳೆಸಲು ಬೋಧಕ ಸದಸ್ಯರನ್ನು ಜ್ಞಾನ ಮತ್ತು ಸಾಧನಗಳೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ