"ಮುಂದಿನ ಪೀಳಿಗೆಗೆ ಮೈತೇಯಿ ಸಂಸ್ಕೃತಿ ಉಳಿವು ಅವಶ್ಯ " ವಿವೇಕ್ ಆಳ್ವ

Upayuktha
0

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 'ನಿಂಗೋಲ್ ಚಕೋಬಾ ಆಚರಣೆ - 2024'



ವಿದ್ಯಾಗಿರಿ (ಮೂಡುಬಿದಿರೆ): 2 ಸಾವಿರ ವರ್ಷಗಳ ಇತಿಹಾಸವಿರುವ ಮೈತೇಯಿ ಸಂಸ್ಕೃತಿ ಇಂದಿಗೂ ಶ್ರೀಮಂತವಾಗಿ ಉಳಿದಿರುವುದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ `ನಿಂಗೋಲ್ ಚಕೊಬಾ' ಆಚರಣೆಯಲ್ಲಿ ಅವರು ಮಾತನಾಡಿದರು. ಸಹೋದರ ಸಹೋದರಿಯರ ನಡುವೆ ಇರುವ ಭ್ರಾತೃತ್ವ ಮತ್ತು ರಕ್ಷಣಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ 'ನಿಂಗೋಲ್ ಚಕೋಬಾ' ಎಂದರು.


ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಎಲ್ಲಾ ಸಂಪ್ರದಾಯ, ಆಚರಣೆ, ಭಾಷೆ, ಆಹಾರ ಪದ್ಧತಿ, ನಂಬಿಕೆಗಳು ಮತ್ತು ಸಂಸ್ಕೃತಿಯನ್ನು ಗೌರವಿಸಿ, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆಯ ಹೆಮ್ಮೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಬಳಿಕ ಮಣಿಪುರಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ನೀಲದರ್ ಕರ್ಕೇರ ಮತ್ತು ಸುಶ್ಮಿತಾ ಅವರ ಮಾರ್ಗದರ್ಶನದಲ್ಲಿ ಮಣಿಪುರಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಹೆಮ್ಮೆಯ ಜಾನಪದ ಕಲೆ ವೀರಗಾಸೆ ಕುಣಿತ ತರಬೇತಿ ನೀಡಿ ವಿಶೇಷವಾಗಿ ಪ್ರದರ್ಶಿಶನ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.


ಮೈತೇಯಿ ಸಂಸ್ಕೃತಿಯುಳ್ಳ ಆಚರಣೆ ಮಾಡುವುದರೊಂದಿಗೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಣಿಪುರದಲ್ಲಿ ಕಷ್ಟದ ಪರಿಸ್ಥಿತಿಯಲ್ಲಿ ಇರುವ ಆಯ್ದ 10 ಕುಟುಂಬಗಳಿಗೆ ಅದರಲ್ಲೂ ವಿಶೇಷವಾಗಿ ಅನಾಥ ನಿರಾಶ್ರಿತ ಕುಟುಂಬಗಳಿಗೆ ತಲಾ 10 ಸಾವಿರ ಸಹಾಯಧನದಂತೆ ಒಂದು ಲಕ್ಷ ರೂಪಾಯಿಯನ್ನು ನೀಡಲಾಗುವುದು ಎಂದು ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು. ಈ ಮಹತ್ ರ‍್ಯಕ್ಕೆ ಮಣಿಪುರದ ಮಾಜಿ ಸಚಿವ ಡಾ ನಾರಾ ಸಿಂಗ್,  ಅಂತಹ ಕುಟುಂಬಗಳನ್ನು ಪತ್ತೆ ಹಚ್ಚಲು ಹಾಗೂ ಸಹಾಯಧನ ಸರಿಯಾದ ಕುಟುಂಬಕ್ಕೆ ತಲುಪುವಂತೆ ಮಾಡಲು ಸಕಕರಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್, ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ ವನಿತಾ ಶೆಟ್ಟಿ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಯತಿಕುಮಾರ್, ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ ರೋಶನ್ ಪಿಂಟೋ ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಎಲ್. ಶ್ರೀನಿವಾಸ್ ನಿರೂಪಿಸಿದರು. ನರೇಶ್ ಮೈಬಮ್ ಸ್ವಾಗತಿಸಿ, ವಂದಿಸಿದರು.


ಮಣಿಪುರಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ವಿದ್ಯಾರ್ಥಿಗಳು ತಯಾರಿಸಿದ ಮಣಿಪುರಿಯ ರುಚಿಕರವಾದ ಸಾಂಪ್ರದಾಯಿಕ ಖಾದ್ಯಗಳಾದ ಇರೊಂಬಾ, ಓಟಿ, ಎಂಗ್ ತೊಂಬಾ, ಮಣಿಪುರಿ ಖೀರ್ , ಚಂಪೂಟ್ ಮತ್ತು ಕಾಂಘೌವನ್ನು ಹಬ್ಬದಲ್ಲಿ ಉಣ ಬಡಿಸಲಾಯಿತು. ಬಳಿಕ, ಎಲ್ಲಾ ಮಣಿಪುರಿಯ ಹೊಸ ವಿದ್ಯಾರ್ಥಿನಿಯರಿಗೆ ತಮ್ಮ ಸಹೋದರರ ಕಡೆಯಿಂದ ಉಡುಗೊರೆಯನ್ನು ನೀಡಿ ಶುಭಾಶಯ ತಿಳಿಸಲಾಯಿತು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top