ಡಿ 21: ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Upayuktha
0




ಪುತ್ತೂರು: ಸಂತ ಫಿಲೋಮಿನಾ  ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 21 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಡಿ 21 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ  ಹೋಲಿ ಸ್ಪಿರಿಟ್ ಚರ್ಚ್, ಮುಕ್ಕ ಇಲ್ಲಿನ ಧರ್ಮ ಗುರುಗಳಾದ. ವಂ. ಸ್ಟಾನಿ ಪಿಂಟೋ ವಹಿಸಲಿದ್ದಾರೆ. 



ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ರೊನಾಲ್ಡ್. ಎಸ್. ಡಿ ಸೋಜಾ  ವಹಿಸಲಿದ್ದಾರೆ. 


ಕಾಲೇಜಿನ ಸಂಚಾಲಕ ವಂ. ಫಾ. ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್. ಡಿ ಕೋಸ್ಟಾ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಡಾ.  ಪ್ರಕಾಶ್ ಬಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ, ವಿದ್ಯಾರ್ಥಿ ಸಂಘದ ನಿರ್ದೇಶಕ ಪ್ರಶಾಂತ್ ಭಟ್. ಪಿ ಹಾಗೂ ಫಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಂಕಿತ ಎಲ್. ಡಿ, ಕಾರ್ಯದರ್ಶಿ ಧ್ರುವ.ಜೆ. ಭಂಡಾರಿ ಹಾಗೂ ಜೊತೆ ಕಾರ್ಯದರ್ಶಿ ಸೃಧನ್. ಕೆ. ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top