ಪುತ್ತೂರು: ಎನ್.ಸಿ.ಇ.ಆರ್.ಟಿ ನವದೆಹಲಿ ಹಾಗೂ ಶಾಲಾ ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಆಯೋಜಿಸಿದ 2024-25 ರ ಸಾಲಿನ ಕಲಾ ಉತ್ಸವದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಅಂಗೀಕ ಶೆಟ್ಟಿ ಇವರು ಭರತನಾಟ್ಯ ಸ್ಪರ್ಧೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಹಾಗೂ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರು ಪುತ್ತೂರಿನ ರಾಜ್ ಕುಮಾರ್ ಮತ್ತು ವಿಶ್ವ ಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ ( ರಿ) ಪುತ್ತೂರು ಇಲ್ಲಿನ ನೃತ್ಯ ಗುರುಗಳಾದ ವಿದುಷಿ ಸ್ವಸ್ತಿಕ ಆರ್ ಶೆಟ್ಟಿ ಇವರ ಪುತ್ರಿಯಾಗಿದ್ದು, ಕರ್ನಾಟಕ ಕಲಾ ಶ್ರೀ ವಿದ್ವಾನ್ ಕುತ್ಕಾಡಿ ವಿಶ್ವನಾಥ್ ರೈ ಮತ್ತು ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ ರೈ ಇವರ ಮೊಮ್ಮಗಳು ಹಾಗೂ ಶಿಷ್ಯೆಯೂ ಆಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕಿ ಸುಮನಾ ರಾವ್, ರಶ್ಮಿ ಪಿ.ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ