ಬಳ್ಳಾರಿ: ಮಹಾನಗರ ಪಾಲಿಕೆ ಬಳ್ಳಾರಿ, ಮೈತ್ರಿ ಸೇವಾ ಸಂಸ್ಥೆ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಇವರ ಸಹಯೋಗದೊಂದಿಗೆ ಪಾಲಿಕೆಯ ಪೌರ ಕಾರ್ಮಿಕ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸದರಿ ಕಾರ್ಯಕ್ರಮದ ಉದ್ಘಾಟನೆಯನ್ನು ಪೂಜ್ಯ ಮಹಾಪೌರರಾದ ನಂದೀಶ ನೇರವೇರಿಸಿ ಮಾತನಾಡುತ್ತ ಈ ಕಾರ್ಯಕ್ರಮ ತುಂಬಾ ಮಹತ್ವವಾದಂತಹ ಕಾರ್ಯಕ್ರಮ ವಿಶೇಷವಾಗಿ ನಮ್ಮ ಪಾಲಿಕೆ ಪೌರಕಾರ್ಮಿಕ ಮಹಿಳೆಯರಿಗೆ ಹಮ್ಮಿಕೊಂಡಿರುವುದು ತುಂಬಾ ಉಪಯುಕ್ತ ಈ ಕಾರ್ಯಕ್ರಮವಾಗಿರುವುದರಿಂದ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾಕ್ಟರ್ ಕವಿತಾ ಸಾಗರ್ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನುವ ಕಾಯಿಲೆ ಮಹಿಳೆಯರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದೆ. ಎಲ್ಲಾ ಮಹಿಳೆಯರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಂಡು ಅವಶ್ಯಕತೆ ಇದ್ದರೆ ಚಿಕಿತ್ಸೆ ಪಡೆದುಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ತಿಳಿಸಿದರು. ಮತ್ತೊಬ್ಬ ಮುಖ್ಯ ಅತಿಥಿಗಳಾಗಿ ಆಗಮಿಸಿದ ರೂಕ್ಸರ್ ಸ್ತ್ರೀ ರೋಗ ತಜ್ಞರು ಮಾತನಾಡುತ್ತ ಯುವತಿಯರು ಇದರ ಬಗ್ಗೆ ತುಂಬಾ ಜಾಗೃತರಾಗಿ ಹಾಗೂ ಪ್ರಸ್ತುತ ದಿನಮಾನ ಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ವೇಗವಾಗಿ ಹರಡಲು ಪ್ರಾರಂಭಿಸಿದೆ. ಇದರ ಬಗ್ಗೆ ಮುಂಜಾಗ್ರತೆ ದೃಷ್ಟಿಯಿಂದ ಲಸಿಕೆ ಪಡೆಯಲು ಕರೆ ನೀಡಿದರು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿಜಯಲಕ್ಷ್ಮಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ. ಬಳ್ಳಾರಿ ಶಾಖೆಯ ವ್ಯವಸ್ಥಾಪಕರು ಇವರು ಗರ್ಭಕಂಠದ ಕ್ಯಾನ್ಸರ್ ಹರಡುವ ಕುರಿತು ತಡೆಗಟ್ಟುವ ಮತ್ತು ಪ್ರತಿಯೊಬ್ಬರಲ್ಲಿ ಹರಡದಂತೆ ಮುಂಜಾಗ್ರತೆಗಾಗಿ ಲಸಿಕೆಯ ಮಹತ್ವ ಬಗ್ಗೆ ವಿವರವಾದ ಮಾಹಿತಿಯನ್ನು ಪೌರ ಕಾರ್ಮಿಕರಿಗೆ ತಿಳಿಸಿದರು.
ಇನ್ನೊಬ್ಬ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾನಗರ ಪಾಲಿಕೆಯ ಉಪ ಮಹಾಪೌರ ಸುಕುಮ್ ಇವರು ಮಾತನಾಡುತ್ತಾ, ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜನೆ ಮಾಡಲು ನಮ್ಮ ಇಲಾಖೆಯ ಮಹಿಳಾ ಪೌರಕಾರ್ಮಿಕರಿಗೆ ಆಯೋಜನೆ ಮಾಡಿಕೊಂಡಿರುವುದಕ್ಕೆ ಧನ್ಯವಾದ ತಿಳಿಸುತ್ತಾ, ಇವತ್ತಿನ ದಿನಗಳಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಯತ್ನ ಮಾಡಬೇಕೆಂದು ತಿಳಿಸಿದರು.
ಸದರಿ ಕಾರ್ಯಕ್ರಮದಲ್ಲಿ ಮೈತ್ರಿ ಸೇವಾ ಸಂಸ್ಥೆಯ ಅಧ್ಯಕ್ಷೆ ವಿದ್ಯಾ, ನಿರ್ದೇಶಕ ವಿನೋದ್ ಕುಮಾರ್ ಮತ್ತು ಸಿಬ್ಬಂದಿಗಳಾದ ಧನುಂಜಯ ಮುಂತಾದವರು ಉಪಸ್ಥಿತರಿದ್ದರು. ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಎಫ್.ಪಿ.ಎ.ಐ ನ ವಿಜಯ ಲಕ್ಷ್ಮಿರಾವ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ