ಬಳ್ಳಾರಿ: ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಹಿನ್ನಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಶನಿವಾರದಂದು ಬಳ್ಳಾರಿ ತಾಲ್ಲೂಕಿನ ಬಸರಕೋಡು ಮತ್ತು ಬಾಣಾಪುರ ಗ್ರಾಮಗಳ ಸಂತ್ರಸ್ತರ ಮನೆಗೆ ಭೇಟಿ ನೀಡಿದರು. ಬಳ್ಳಾರಿ ತಾಲ್ಲೂಕಿನ ಬಸರಕೋಡು ಗ್ರಾಮದ ಕಮ್ಮಾರಿ ಲಲಿತಾ ಅವರ ಮನೆಗೆ ಭೇಟಿ ನೀಡಿ, ಪೋಷಕರ ಜೊತೆ ಮಾತನಾಡಿ ಸಾಂತ್ವನ ತುಂಬಿದರು.
ಧೈರ್ಯದಿಂದ ಮಗುವನ್ನು ಆರೈಕೆ ಮಾಡಬೇಕು, ಸರ್ಕಾರದಿಂದ ಹೆಚ್ಚಿನ ನೆರವು ನೀಡಲಾಗುವುದು ಎಂದರು. ಇದಕ್ಕೂ ಮುನ್ನ ಬಾಣಾಪುರ ಗ್ರಾಮದ ಮೃತೆ ಹೂಗಾರ ನಂದಿನಿ ಅವರ ಮನೆಗೆ ಸಚಿವರು ಭೇಟಿ ನೀಡಿದರು.
ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ತಹಶೀಲ್ದಾರ ಗುರುರಾಜ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ