ಶೀಘ್ರದಲ್ಲಿ ಬೆಂಗ್ರೆಯ ಹಕ್ಕುಪತ್ರ ಸಮಸ್ಯೆ ಇತ್ಯರ್ಥ: ಶಾಸಕ ಕಾಮತ್

Upayuktha
0


ಮಂಗಳೂರು: ಮಂಗಳೂರಿನ ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿದರು.


ಹಕ್ಕುಪತ್ರ ವಿತರಣೆಯಲ್ಲಿ ಇಲ್ಲ ಸಲ್ಲದ ಗೊಂದಲಗಳಿಂದ ವಿಳಂಬ ನೀತಿ ಅನುಸರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಕೂಡಲೇ ಜನಪರವಾದ ದೃಢ ನಿರ್ಣಯ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಆದೇಶ ನೀಡುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು. ಸಭೆಯ ನಂತರ, ಸುಮಾರು 40 ವರ್ಷಗಳಿಂದ ಪರಿತಪಿಸುತ್ತಿರುವ ಬೆಂಗ್ರೆ ಪರಿಸರದ ಜನತೆಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗಲಿದೆ ಎಂದು ಶಾಸಕರು ತಿಳಿಸಿದರು.


ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳು, ತಹಶಿಲ್ದಾರ್, ಪಾಲಿಕೆ ಆಯುಕ್ತರು, ಕಂದಾಯ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top