ಪೆರ್ಡೂರು: ಬೆಳ್ಳರ್ಪಾಡಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠೆ, ಮಹಾಬಲಿಪೀಠ ಪ್ರತಿಷ್ಠೆ, ನೂತನ ರಾಜಗೋಪುರ ಸಮರ್ಪಣಾ ಪೂರ್ವಕ ಬ್ರಹ್ಮಕಲಕೋತ್ಸವ ಮತ್ತು ವಾರ್ಷಿಕ ಶ್ರೀಮನ್ಮಹಾರಥೋತ್ಸವವು ಜನವರಿ 6ರಿಂದ 18ರ ತನಕ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸಮಗ್ರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ. ಶಿವರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಜೇತ ಕುಮಾರ್, ಅರ್ಚಕರಾದ ರಾಮಮೂರ್ತಿ ಭಟ್, ಸದಸ್ಯರಾದ ಲಕ್ಷ್ಮೀನಾರಾಯಣ ಭಟ್ ಮತ್ತು ರೋಹಿತ್ ಶೆಟ್ಟಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ