ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಕೃಷ್ಣ ಭಟ್ಟರ ಶತಮಾನೋತ್ಸವ ಪ್ರಶಸ್ತಿ ಪ್ರದಾನ
ಪೆರ್ಲ: ಅಧ್ಯಾಪಕ, ಅರ್ಥಧಾರಿ, ವಿದ್ವಾಂಸ, ಹಿಂದಿಪಂಡಿತ, ಲೇಖಕರಾಗಿದ್ದ ಬಹುಮುಖ ಸಾಧಕ ದಿವಂಗತ ಪೆರ್ಲ ಕೃಷ್ಣ ಭಟ್ಟರ ನೂರರ ನೆನಪು ಕಾರ್ಯಕ್ರಮ ಪೆರ್ಲದ ಭಾರತಿ ಸದನದಲ್ಲಿ ಜರಗಿತು.
ಪೆರ್ಲ ಕೃಷ್ಣ ಭಟ್ಟ ಸಾಂಸ್ಕೃತಿಕ ಪ್ರತಿಷ್ಟಾನದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಎಡನೀರು ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶಾಂಭಟ್ ಅಧ್ಯಕ್ಷತೆ ವಹಿಸಿದ್ದರು. ಆರ್.ಎಸ್.ಎಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ಟರು ಸಂಸ್ಮರಣಾ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಕೃಷ್ಣ ಭಟ್ಡರ ಶತಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ. ಎಂ.ಪ್ರಭಾಕರ ಜೋಷಿ ಅಭಿನಂದನಾ ಭಾಷಣ ಮಾಡಿದರು. ಕೊಲ್ಲೂರು ದೇವಳದ ಮಾಜಿ ಆಡಳಿತ ಮೊಕ್ತೇಸರ ಕೃಷ್ಣ ಪ್ರಸಾದ ಅಡ್ಯಂತಾಯ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಕಾರ್ಯದರ್ಶಿ ರಾಜಾರಾಮ ಕು.ಅನುಕ್ತ ಪ್ರಾರ್ಥನೆ ಹಾಡಿದರು. ಸ್ವಾಗತಿಸಿ ಡಾ.ಶ್ರೀಪತಿ ಕಜಂಪಾಡಿ ವಂದಿಸಿದರು. ನಿವೃತ್ತ ಶಿಕ್ಷಕ ರಾಜೇಂದ್ರ ಬಜಕೂಡ್ಳು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ