ಚಿಕ್ಕಬಳ್ಳಾಪುರ: ಭಾವೈಕ್ಯ ಯುವಜನ ಸಂಘ ಚಿಕ್ಕಬಳ್ಳಾಪುರ ಹಾಗೂ ಗ್ರಾಮಾಂತರ ಟ್ರಸ್ಟ್ ಬೆಂಗಳೂರು ರವರ ಸಹಯೋಗದಲ್ಲಿ ಸರ್ಕಾರಿ ಶಾಲಾ ಮಕ್ಕಳ ಇಂಗ್ಲೀಷ್ ಬರವಣಿಗೆಯ ಕೌಶಲ್ಯವನ್ನು ಅಭಿವೃದ್ಧಿ ಪಡಿಸುವ ಉದ್ದೇಶಿತ "ಇಂಗ್ಲೀಷ್ ಕರ್ಸಿವ್ ಬರವಣಿಗೆ ಕೌಶಲ್ಯ ಯೋಜನೆ" ಅಡಿಯಲ್ಲಿ ಭಾಯುಸ ಅಧ್ಯಕ್ಷ ಪವನ್ ರವರ ನೇತೃತ್ವದಲ್ಲಿ ಬುಧವಾರ ಹೊಸಕೋಟೆ ತಾಲ್ಲೂಕಿನ ಚೀಮಸಂದ್ರ ಗ್ರಾಮದ ಸ.ಕಿ.ಪ್ರಾ. ಶಾಲೆ ಮತ್ತು ಹಳೆಊರು ಗ್ರಾಮದ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಇಂಗ್ಲಿಷ್ ಕರ್ಸಿವ್ ಬರವಣಿಗೆ ಪುಸ್ತಕಗಳು ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.
ಉಪಾಧ್ಯಕ್ಷೆ ಮಧುಶ್ರೀ ರವರು ಮತ್ತು ಸ್ವಯಂ ಸೇವಕರು ತಾಲ್ಲೂಕಿನ ಬೇಗೂರು ಗ್ರಾಮದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಈ ಯೋಜನಾ ಚಟುವಟಿಕೆಯನ್ನು ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ದೇವನಹಳ್ಳಿ ಹಾಗೂ ಹೊಸಕೋಟೆ ತಾಲ್ಲೂಕು ಸೇರಿದಂತೆ ಒಟ್ಟು 14 ಸರ್ಕಾರಿ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದು ಮಾರ್ಚ್ ತಿಂಗಳಲ್ಲಿ ಶಾಲಾ ಮಟ್ಟದಲ್ಲಿ ಬರವಣಿಗೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ನೀಡಲಾಗುವುದು.
ಈ ಯೋಜನೆಗೆ ಹಾಗೂ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ ಬೆಂಬಲ ನೀಡಲು ಸಾರ್ವಜನಿಕರು 7975979378 ಸಂಪರ್ಕಿಸಬಹುದಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ