ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಕುರಿತ ಹೇಳಿಕೆಗಳಿಗೆ ಸ್ಪಷ್ಟೀಕರಣ

Upayuktha
0


ಮಂಗಳೂರು: ಸಾಮಾಜಿಕ ಜಾಲ️ತಾಣದಲ್ಲಿ ಎಂ.ಸಿ.ಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟೀಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ. 


ವ್ಯಕ್ತಿಯೊಬ್ಬರು ಎಂ.ಸಿ.ಸಿ ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ. 


ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವೈಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರೂ ಮಧ್ಯ ಪ್ರವೇಶಿಸಿರುವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಪ್ರಕಟಣೆಯ ಮೂಲಕ ತಿಳಿಯಪಡಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top