ಕರ್ನಲ್ ಕೃಷ್ಣಪ್ರಸಾದ್ ಜಿ.ವಿ ಅವರಿಗೆ ಹವ್ಯಕ ದೇಶರತ್ನ ಪ್ರಶಸ್ತಿ

Upayuktha
0




ಸುಳ್ಯ: ಡಿಸೆಂಬರ್ 27ರಿಂದ 29ರ ತನಕ ಬೆಂಗಳೂರು ಅರಮನೆ ಮೈದಾನದಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭಾ ನೇತೃತ್ವದಲ್ಲಿ ಜರಗಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ದೇಶರತ್ನ ಪ್ರಶಸ್ತಿ ಪುರಸ್ಕೃತರಾಗಲು ದಿ. ಡಾ ವಾಂತಿಚ್ಚಾಲು ಗೋಪಾಲಕೃಷ್ಣ ಭಟ್ ಹಾಗೂ ಅನುರಾಧ ಜಿ ಭಟ್ ದಂಪತಿಗಳ ಪ್ರಥಮ ಪುತ್ರ ಕರ್ನಲ್ ಡಾ ಕೃಷ್ಣಪ್ರಸಾದ್ ಜಿ ವಿ ಆಯ್ಕೆ ಆಗಿದ್ದಾರೆ.


ಭಾರತೀಯ ಭೂಸೇನೆಯಲ್ಲಿ 20 ವರುಷಗಳಿಂದ ಅರಿವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಅವರು ಪ್ರಕೃತ ಪಶ್ಚಿಮ ಬಂಗಾಲದ ಬಾಗ್ ಡೋಗ್ರಾ ಸೇನಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ಉದಯಗಿರಿ ಪ್ರಾಥಮಿಕ ಶಾಲೆ, ಬದಿಯಡ್ಕ ನವಜೀವನ ಪ್ರೌಢಶಾಲೆ, ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆ, ಎಸ್‌ಡಿಎಂ ಪದವಿಪೂರ್ವ ಕಾಲೇಜು ಉಜಿರೆಯಲ್ಲಿ ವ್ಯಾಸಂಗ ಮಾಡಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ಹುಬ್ಬಳ್ಳಿಯಲ್ಲಿ ಎಂಬಿಬಿಎಸ್ ಪದವಿ ಪಡೆದು ಬೆಂಗಳೂರು ಕಮಾಂಡೋ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಎಂ.ಡಿ ಪದವಿ ಪಡೆದರು.


ಅವರ ಪತ್ನಿ ಡಾ ಮಮತಾರವರು ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ರ ಅಶ್ಮಿತ್ ಕೃಷ್ಣ ಭಟ್ ವಾಂತಿಚ್ಚಾಲು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top