ಸಮೃದ್ಧ ಕರ್ನಾಟಕಕ್ಕೆ ಸಮರ್ಥ ಪ್ರಜೆಗಳ ನಿರ್ಮಾಣ: ಪಿಜಿಆರ್. ಸಿಂಧ್ಯಾ
ವಿದ್ಯಾಗಿರಿ: 'ಸಮೃದ್ಧ ಮತ್ತು ಸಮರ್ಥ ಕರ್ನಾಟಕ ಕಟ್ಟುವ ಉದ್ದೇಶದಿಂದ ದೇಶದ ಭವಿಷ್ಯದ ಪ್ರಜೆಗಳಿಗೆ ಹಮ್ಮಿಕೊಂಡ ಕಾರ್ಯಕ್ರಮ' ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಹೇಳಿದರು.
ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗಿತ್ವದಲ್ಲಿ 30 ನೇ ಆಳ್ವಾಸ್ ವಿರಾಸತ್ ಸಂರ‍್ಭದಲ್ಲಿ ನಡೆದ ರಾಜ್ಯ ಮಟ್ಟದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್ಸ್ ರೇಂಜರ್ಸ್ ಸಾಂಸ್ಕೃತಿಕ ಉತ್ಸವ-2024ರ ಸಮಾರೋಪ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ನ ಕಲಿಕಾ ಅನುಭವವನ್ನು ಜೀವನ ಪದ್ಧತಿಗಾಗಿ ಅಳವಡಿಸಿಕೊಳ್ಳಬೇಕು..ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಯಾಗಿ ಅನೇಕ ಬದಲಾವಣೆ ತಂದಿದೆ. ಆದ್ದರಿಂದ, ಆರಂಭದಲ್ಲಿ ಇದ್ದಂತಹ ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಕಲಿಕಾ ಕ್ರಮವನ್ನು ಬದಲಾಯಿಸುವುದು ತೀರ ಅವಶ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟರು..
ಇಂದಿನ ಮಕ್ಕಳಲ್ಲಿ ಸಾಂಸ್ಕೃತಿಕ , ಕ್ರೀಡೆ , ಕಲೋತ್ಸವ ಮತ್ತು ಪ್ರಕೃತಿ ಅಧ್ಯಯನಕ್ಕೆ ಹೆಚ್ಚು ಮಹತ್ವ ಸಿಗಬೇಕಿದೆ. ಈ ರೀತಿಯ ಸಾಂಸ್ಕೃತಿಕ ಉತ್ಸವದಲ್ಲಿ ಸಾಹಸಮಯ ಕ್ರೀಡೆಗಳನ್ನು ಆಯೋಜಿಸಿದ್ದರಿಂದ , ಸೇನೆಗೆ ಪ್ರವೇಶಿಸುವ ಆಕಾಂಕ್ಷಿಗಳಿಗೆ ಉತ್ತಮ ಮೂಲ ವೇದಿಕೆಯನ್ನು ಕಲ್ಪಿಸಿದಂತಾಗಿದೆ ಎಂದರು. ಸಂಸ್ಥೆಯಿಂದ ಕೈಗೊಂಡಿರುವ ಪ್ರೇರಣಾ ಕಾರ್ಯಕ್ರಮ ಹೆಣ್ಣುಮಕ್ಕಳಿಗೆ ಪೂರಕವಾಗಿ ಸ್ವಚ್ಛತೆ , ಜ್ಞಾನ ಮಟ್ಟವನ್ನು ಹೆಚ್ಚಿಸಲು ಅರಿವನ್ನು ಮೂಡಿಸುವ ಪ್ರಯತ್ನವನ್ನು ಮಾಡುತ್ತಿದೆ . ಇಂತಹ ಕರ‍್ಯಕ್ರಮ ರಾಜ್ಯದ ವಿವಿಧ ಭಾಗಗಳಲ್ಲಿಯೂ ಸವಿಸ್ತಾರವಾಗಿ ಮುಂದುವರೆಯಬೇಕು . ಪ್ರತಿ ಜಿಲ್ಲೆಯಲ್ಲೂ ಸೇವಾ ಶಿಬಿರಗಳು ಹೆಚ್ಚೆಚ್ಚು ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯ , ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜೂಜಾರೆ ಮತ್ತು ನಿತಿನ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಮೈಸೂರು ವಿಭಾಗ ಸಹಾಯಕ ರಾಜ್ಯ ಆಯುಕ್ತ ಬಸವರಾಜ್ , ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತೆ ವಿಮಲಾ ರಂಗಯ್ಯ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಮಾರ್, ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್ , ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಬಿ ಎಂ ತುಂಬೆ ಇದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರದ ವರದಿಯನ್ನು ಬೆಂಗಳೂರು ಉತ್ತರದ ಶಿಬಿರದ ಮೇಲ್ವಿಚಾರಕ ನಿತಿನ್ ಅಮೀನ್ ವಾಚಿಸಿದರು. ಶಿಬಿರದಲ್ಲಿ ಭಾಗಿಯಾದ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಶಿಬಿರದ ಯಶಸ್ಸಿಗೆ ಸಹಕರಿಸಿದ ವ್ಯಕ್ತಿಗಳನ್ನು ಮತ್ತು ಪ್ರತಿ ಜಿಲ್ಲೆಯ ಪ್ರತಿನಿಧಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ