ಡಿ.21ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ

Upayuktha
0


ಮಂಗಳೂರು: 1946ರಲ್ಲಿ ರಚಣೆಯಾದ ಸಂವಿಧಾನ ರಚನಾ ಸಭೆಯು ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನದ ಕರಡು ರಚನೆಗೆ ಸಮಿತಿ ರಚಿಸಿತ್ತು. ನವೆಂಬರ್ 1949ರಂದು ಸಂವಿಧಾನದ ಕರಡನ್ನು ರಚನಾ ಸಭೆಯ ಅಧ್ಯಕ್ಷ ಬಾಬು ರಾಜೇಂದ್ರ ಪ್ರಸಾದ್ ಅವರಿಗೆ ಅರ್ಪಿಸುತ್ತಾರೆ. ಬಳಿಕ ಜನವರಿ 26 1950ರಂದು ಭಾರತದ ಅಧಿಕೃತ ಸಂವಿಧಾನವಾಗಿ ಘೋಷಿಸಲ್ಪಡುತ್ತದೆ. ಈ ನಿಟ್ಟಿನಲ್ಲಿ ಸಂವಿಧಾನಕ್ಕೆ 75 ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಣೆ ಮತ್ತು ಸಂವಿಧಾನ ಜಾಗೃತಿಗಾಗಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಘಟನೆಯು 26 ನವೆಂಬರ್ 2024 ರಿಂದ ಜನವರಿ 26, 2025ರವರೆಗೆ ಸಂವಿಧಾನ ಸನ್ಮಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಮ್ಮಾನ ಸಮಿತಿಯ ಜಿಲ್ಲಾ ಸಂಚಾಲಕ ಪ್ರೇಮಾನಂದ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 


ಡಿ.21ರಂದು ಮಂಗಳೂರು ಪುರಭವನದಲ್ಲಿ ಸಂವಿಧಾನ ಸಮ್ಮಾನ ಹಾಗೂ ಸಂವಿಧಾನ ಬದಲಾಯಿಸಿದ್ದು ಯಾರು ಪುಸ್ತಕ ಲೋಕಾರ್ಪಣೆ ನಡೆಯಲಿದೆ ಎಂದರು. ಸಂಘಟನೆ ಪ್ರಮುಖರಾದ ವಿಕಾಸ್ ಪುತ್ತೂರು, ಸಹಸಂಚಾಲಕರು ವಿನಯ್ ನೇತ್ರ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top